ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೀಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರು

Twitter
Facebook
LinkedIn
WhatsApp
ವೀಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಉಡುಪಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದಾರೆ.

ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.

ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.

ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.

Udupi Video ಘಟನೆ ತಮಾಷೆಯಲ್ಲ, ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಬಿಜೆಪಿ ಎಚ್ಚರಿಕೆ

ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆಗೆ ಸಂಬಂಧಿಸಿದಂತೆ ಉಡುಪಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕಡಿಯಾಳಿ ಬಿಜೆಪಿ ಕಚೇರಿಯಿಂದ ಬನ್ನಂಜೆ ಎಸ್.ಪಿ ಕಚೇರಿಯವರಿಗೆ ಪ್ರತಿಭಟನಾ ಮೆರೆವಣಿಗೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, “ಇದು ತಮಾಷೆಯ ವಿಚಾರವಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಸುಮ್ಮನಿರುವುದಿಲ್ಲ. ಗೃಹ ಸಚಿವರ ಮಗ ಲಿಂಗ ಪರಿವರ್ತನೆ ಮಾಡಿಕೊಂಡಿರುವುದು ತಮಾಷೆಗೆ ಆಗಿರಬಹುದು, ಆದರೆ ಇದು ತಮಾಷೆಯ ವಿಚಾರವಲ್ಲ ಎಂದು ಗುಡುಗಿದರು.

ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಕಿವಿ ಮತ್ತು ಮೂಗಿಲ್ಲದಂತೆ ವರ್ತಿಸುತ್ತಿದ್ದಾರೆ. ವಿಡಿಯೋ ಚಿತ್ರೀಕರಣ ಮಾಡಲು ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿರುವುದು ಯಾರು ಮತ್ತು ಹಿಂದೆ ಯಾರಿದ್ದಾರೆಂದು ಸಂಪೂರ್ಣ ತನಿಖೆಯಾಗಬೇಕು. ಇದರ ಹಿಂದೆ ಪಿಎಫ್ ಐ ಮಹಿಳಾ ಘಟಕದ ಕೈವಾಡವೂ ಇರಬಹುದು. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಶಾಸಕ ಯಶಪಾಲ್ ಸುವರ್ಣ ಆಗ್ರಹಿಸಿದರು.

ಉಗ್ರ ಹೋರಾಟ: ಇದೇ ವೇಳೆ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳಿ, ಹಿಂದುತ್ವ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳಬಾರದು. ಕಾಂಗ್ರೆಸ್ ಮತ್ತು ಕಮುನ್ಯಿನಸ್ಟರ ಹೆಣ್ಣುಮಕ್ಕಳನ್ನು ಕಾಪಾಡಲು ಕೊನೆಗೆ ಸಂಘ ಪರಿವಾರವೇ ಬೆಕಾಗುತ್ತದೆ. ಇಂತಹ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು, ಸರ್ಕಾರ ಹಸ್ತಕ್ಷೇಪ ಮಾಡಬಾರದು. ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಮಾತನಾಡಿ, ಕಾಲೇಜು ಆಡಳಿತ ಮಂಡಳಿ ತಕ್ಷಣವೇ ಆಡಳಿತಾಧಿಕಾರಿ ಅಬ್ದುಲ್ ಖಾದರ್ ರನ್ನು ಅಮಾನತು ಮಾಡೇಕು. ಅದೇ ರೀತಿ ತಪ್ಪಿತಸ್ಥ ವಿದ್ಯಾರ್ಥಿನಿಯರನ್ನು ಡಿಬಾರ್ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೇರಿ ಹಲವರು ಭಾಗಿಯಾಗಿದ್ದರು. ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಐಜಿ ಚಂದ್ರಗುಪ್ತ ಭೇಟಿ: ಎಸ್ ಪಿ ಕಚೇರಿಗೆ ಪಶ್ಚಿಮ ವಲಯ ಐಜಿ ಚಂದ್ರಗುಪ್ತ ಅವರು ಶುಕ್ರವಾರ ಭೇಟಿ ನೀಡಿದರು. ತನಿಖಾಧಿಕಾರಿ ಮಂಜುನಾಥ ಗೌಡ ಅವರಿಂದ ಪ್ರಕರಣದ ಬಗೆಗಿನ ಸಂಪೂರ್ಣ ವಿವರ ಪಡೆದುಕೊಂಡರು. ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು