ವಿಟ್ಲ :ಮಾರ್ಬಲ್ ತುಂಬಿದ ಲಾರಿ ಪಲ್ಟಿ ; ನಾಲ್ವರು ಕಾರ್ಮಿಕರಲ್ಲಿ ಓರ್ವ ಸಾವು ; ಮೂವರು ಗಂಭೀರ...!
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಇದೀಗ ಬಂದ ಮಾಹಿತಿ ಪ್ರಕಾರ ಓರ್ವ ಸಾವನ್ನಪ್ಪಿದ್ದು ಮೂವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.
ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು
ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.
ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ ಎಂದು ಮಾಹಿತಿ ಲಭಿಸಿದೆ.
ಸೂರಿಕುಮೇರು : ಪಲ್ಟಿಯಾಗಿ ಚರಂಡಿಗೆ ಬಿದ್ದ ಬಾಳೆಹಣ್ಣು ಸಾಗಾಟದ ಪಿಕಪ್
ವಿಟ್ಲ ಅಕ್ಟೋಬರ್ 4: ಬಾಳೆ ಹಣ್ಣು ಸಾಗಾಟದ ಪಿಕಪ್ ಒಂದು ಪಲ್ಟಿಯಾಗಿ ಚರಂಡಿಗೆ ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯೊಳಗೆ ನಿಂತಿದೆ, ನಿದ್ದೆಯ ಮಂಪರಿನಲ್ಲಿ ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.