Lok Sabha Election 2024: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ; ಯಾವಾಗ ಚುನಾವಣೆ?
ಭಾರತೀಯ ಚುನಾವಣಾ ಆಯೋಗ (Election Commission of India) ಇಂದು (ಶನಿವಾರ) 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು (Lok Sabha Election Dates) ಪ್ರಕಟಿಸಿದೆ. 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ಏಪ್ರಿಲ್ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ
1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)
2.ಹಾಸನ (ಸಾಮಾನ್ಯ)
3.ದಕ್ಷಿಣ ಕನ್ನಡ (ಸಾಮಾನ್ಯ)
4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
5..ತುಮಕೂರು (ಸಾಮಾನ್ಯ)
6.ಮಂಡ್ಯ (ಸಾಮಾನ್ಯ)
7.ಮೈಸೂರು-ಕೊಡಗು (ಸಾಮಾನ್ಯ)
8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
10 ಬೆಂಗಳೂರು ಉತ್ತರ (ಸಾಮಾನ್ಯ)
11. ಬೆಂಗಳೂರು ಕೇಂದ್ರ (ಸಾಮಾನ್ಯ)
12. ಬೆಂಗಳೂರು ದಕ್ಷಿಣ (ಸಾಮಾನ್ಯ)
13.ಚಿಕ್ಕಬಳ್ಳಾಪುರ (ಸಾಮಾನ್ಯ)
14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)
Schedule for General Elections to Lok Sabha 2024
— Election Commission of India (@ECISVEEP) March 16, 2024
Phase 2#GeneralElections2024 #MCC pic.twitter.com/YAmmt2XuwW
ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ
1.ಚಿಕ್ಕೋಡಿ (ಸಾಮಾನ್ಯ)
2.ಬೆಳಗಾವಿ (ಸಾಮಾನ್ಯ)
3.ಬಾಗಲಕೋಟೆ (ಸಾಮಾನ್ಯ)
4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
7.ಬೀದರ್ (ಸಾಮಾನ್ಯ)
8,ಕೊಪ್ಪಳ (ಸಾಮಾನ್ಯ)
9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
10. ಹಾವೇರಿ (ಸಾಮಾನ್ಯ)
11. ಧಾರವಾಡ (ಸಾಮಾನ್ಯ)
12.ಉತ್ತರ ಕನ್ನಡ (ಸಾಮಾನ್ಯ)
13.ದಾವಣಗೆರೆ (ಸಾಮಾನ್ಯ)
14.ಶಿವಮೊಗ್ಗ (ಸಾಮಾನ್ಯ)
Schedule for General Elections to Lok Sabha 2024
— Election Commission of India (@ECISVEEP) March 16, 2024
Phase 3#GeneralElections2024 #MCC pic.twitter.com/wbCM77IJmi
ಫೇಕ್ ಸುದ್ದಿಗಳ ಮೇಲೆ ನಿಗಾ
ರೈಲ್ವೆ ಸ್ಟೇಷನ್, ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಯಲಿದೆ. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು. ಫೇಕ್ ಸುದ್ದಿಗಳ ಮೇಲೂ ಆಯೋಗ ನಿಗಾ ಇಡಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳ ನಿಗ್ರಹ ಮಾಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ.
ಫೇಕ್ ಸುದ್ದಿಗಳ ಮೇಲೆ ನಿಗಾ
ರೈಲ್ವೆ ಸ್ಟೇಷನ್, ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಯಲಿದೆ. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು. ಫೇಕ್ ಸುದ್ದಿಗಳ ಮೇಲೂ ಆಯೋಗ ನಿಗಾ ಇಡಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳ ನಿಗ್ರಹ ಮಾಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ.
ಯಾವುದೇ ಬಲ ಅಥವಾ ಹಣದ ಶಕ್ತಿಯನ್ನು ಬಳಸಲಾಗುವುದಿಲ್ಲ
ಯಾವುದೇ ಬಲ ಅಥವಾ ಹಣದ ಶಕ್ತಿಯನ್ನು ಬಳಸಲಾಗುವುದಿಲ್ಲ, ಯಾವುದೇ ತಪ್ಪು ಮಾಹಿತಿ ಹರಡುವುದಿಲ್ಲ. MCC ಯ ಯಾವುದೇ ಉಲ್ಲಂಘನೆಗಳು ನಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಶ್ರಮಿಸುತ್ತದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವಲ್ಲಿ ಬೆದರಿಸುವ ಸವಾಲುಗಳು ನಾಲ್ಕು ಪಟ್ಟು, 4Ms: Muscle, Money, misinformation ಮತ್ತು MCC ಉಲ್ಲಂಘನೆ ಎಂದು ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ.
ಡ್ರೋನ್ ಮೂಲಕ ಕಣ್ಗಾವಲು
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್ ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಮಾಡಲಾಗುತ್ತಿದೆ. ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕರ್ತವ್ಯ ನಿರ್ವಹಿಸಲಿವೆ.ಚೆಕ್ ಪೋಸ್ಟ್ ಗಳಲ್ಲಿ CRPF ತುಕಡಿ ನಿಯೋಜನೆ ಮಾಡಲಾಗುವುದು. ರೌಡಿಶೀಟರ್ಗಳು, ಅಪರಾಧ ಹಿನ್ನೆಲೆ ವ್ಯಕ್ತಿಗಳ ಮೇಲೂ ತೀವ್ರ ನಿಗಾ ವಹಿಸಲಾಗುತ್ತದೆ. ಅಂತಾರಾಷ್ಟ್ರೀಯ ಗಡಿಯಲ್ಲೂ ಡ್ರೋನ್ ಮೂಲಕ ಕಣ್ಗಾವಲು ಇರಲಿದೆ.
Watch LIVE : Press Conference by Election Commission today to announce schedule for #GeneralElection2024 & some State Assemblies
— Spokesperson ECI (@SpokespersonECI) March 16, 2024
Time : 3 pm onwardshttps://t.co/1KQwGPyoT1