ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Lok Sabha Election 2024: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ; ಯಾವಾಗ ಚುನಾವಣೆ?

Twitter
Facebook
LinkedIn
WhatsApp
Lok Sabha Election 2024: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ; ಯಾವಾಗ ಚುನಾವಣೆ?

ಭಾರತೀಯ ಚುನಾವಣಾ ಆಯೋಗ (Election Commission of India) ಇಂದು (ಶನಿವಾರ) 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು (Lok Sabha Election Dates) ಪ್ರಕಟಿಸಿದೆ.  7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು  ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)

2.ಹಾಸನ (ಸಾಮಾನ್ಯ)

3.ದಕ್ಷಿಣ ಕನ್ನಡ (ಸಾಮಾನ್ಯ)

4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)

5..ತುಮಕೂರು (ಸಾಮಾನ್ಯ)

6.ಮಂಡ್ಯ (ಸಾಮಾನ್ಯ)

7.ಮೈಸೂರು-ಕೊಡಗು (ಸಾಮಾನ್ಯ)

8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)

9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)

10 ಬೆಂಗಳೂರು ಉತ್ತರ (ಸಾಮಾನ್ಯ)

11. ಬೆಂಗಳೂರು ಕೇಂದ್ರ (ಸಾಮಾನ್ಯ)

12. ಬೆಂಗಳೂರು ದಕ್ಷಿಣ (ಸಾಮಾನ್ಯ)

13.ಚಿಕ್ಕಬಳ್ಳಾಪುರ (ಸಾಮಾನ್ಯ)

14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)

2.ಬೆಳಗಾವಿ (ಸಾಮಾನ್ಯ)

3.ಬಾಗಲಕೋಟೆ (ಸಾಮಾನ್ಯ)

4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)

5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)

6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)

7.ಬೀದರ್ (ಸಾಮಾನ್ಯ)

8,ಕೊಪ್ಪಳ (ಸಾಮಾನ್ಯ)

9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)

10. ಹಾವೇರಿ (ಸಾಮಾನ್ಯ)

11. ಧಾರವಾಡ (ಸಾಮಾನ್ಯ)

12.ಉತ್ತರ ಕನ್ನಡ (ಸಾಮಾನ್ಯ)

13.ದಾವಣಗೆರೆ (ಸಾಮಾನ್ಯ)

14.ಶಿವಮೊಗ್ಗ (ಸಾಮಾನ್ಯ)

ಫೇಕ್ ಸುದ್ದಿಗಳ ಮೇಲೆ ನಿಗಾ

ರೈಲ್ವೆ ಸ್ಟೇಷನ್, ಏರ್​ಪೋರ್ಟ್​ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಯಲಿದೆ. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು. ಫೇಕ್ ಸುದ್ದಿಗಳ ಮೇಲೂ ಆಯೋಗ ನಿಗಾ ಇಡಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳ ನಿಗ್ರಹ ಮಾಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ.

ಫೇಕ್ ಸುದ್ದಿಗಳ ಮೇಲೆ ನಿಗಾ

ರೈಲ್ವೆ ಸ್ಟೇಷನ್, ಏರ್​ಪೋರ್ಟ್​ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಯಲಿದೆ. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು. ಫೇಕ್ ಸುದ್ದಿಗಳ ಮೇಲೂ ಆಯೋಗ ನಿಗಾ ಇಡಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳ ನಿಗ್ರಹ ಮಾಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ.

ಯಾವುದೇ ಬಲ ಅಥವಾ ಹಣದ ಶಕ್ತಿಯನ್ನು ಬಳಸಲಾಗುವುದಿಲ್ಲ

ಯಾವುದೇ ಬಲ ಅಥವಾ ಹಣದ ಶಕ್ತಿಯನ್ನು ಬಳಸಲಾಗುವುದಿಲ್ಲ, ಯಾವುದೇ ತಪ್ಪು ಮಾಹಿತಿ ಹರಡುವುದಿಲ್ಲ. MCC ಯ ಯಾವುದೇ ಉಲ್ಲಂಘನೆಗಳು ನಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಶ್ರಮಿಸುತ್ತದೆ.  ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವಲ್ಲಿ ಬೆದರಿಸುವ ಸವಾಲುಗಳು ನಾಲ್ಕು ಪಟ್ಟು, 4Ms: Muscle, Money, misinformation ಮತ್ತು MCC ಉಲ್ಲಂಘನೆ ಎಂದು ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ.

ಡ್ರೋನ್​ ಮೂಲಕ ಕಣ್ಗಾವಲು

ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್​ ಪೋಸ್ಟ್ ಇರಲಿವೆ, ಡ್ರೋನ್​ ಮೂಲಕ ಕಣ್ಗಾವಲು ಮಾಡಲಾಗುತ್ತಿದೆ. ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕರ್ತವ್ಯ ನಿರ್ವಹಿಸಲಿವೆ.ಚೆಕ್​ ಪೋಸ್ಟ್ ಗಳಲ್ಲಿ CRPF ತುಕಡಿ ನಿಯೋಜನೆ ಮಾಡಲಾಗುವುದು. ರೌಡಿಶೀಟರ್​ಗಳು, ಅಪರಾಧ ಹಿನ್ನೆಲೆ ವ್ಯಕ್ತಿಗಳ ಮೇಲೂ ತೀವ್ರ ನಿಗಾ ವಹಿಸಲಾಗುತ್ತದೆ. ಅಂತಾರಾಷ್ಟ್ರೀಯ ಗಡಿಯಲ್ಲೂ ಡ್ರೋನ್ ಮೂಲಕ ಕಣ್ಗಾವಲು ಇರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ