ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆ ಚುನಾವಣೆ ರಾಷ್ಟ್ರಪ್ರೇಮಿಗಳ ಹಾಗೂ ರಾಷ್ಟ್ರಧ್ರೋಹಿಗಳ ನಡುವಿನ ಚುನಾವಣೆ-ಬ್ರಿಜೆಷ್ ಚೌಟ ವಾಗ್ದಾಳಿ

Twitter
Facebook
LinkedIn
WhatsApp
ಲೋಕಸಭೆ ಚುನಾವಣೆ ರಾಷ್ಟ್ರಪ್ರೇಮಿಗಳ ಹಾಗೂ ರಾಷ್ಟ್ರಧ್ರೋಹಿಗಳ ನಡುವಿನ ಚುನಾವಣೆ-ಬ್ರಿಜೆಷ್ ಚೌಟ ವಾಗ್ದಾಳಿ

 ಈ ಬಾರಿ ಚುನಾವಣೆ ರಾಷ್ಟ್ರ ಪ್ರೇಮಿಗಳ ಆಗ ರಾಷ್ಟ್ರಧ್ರೋಹಿಗಳ ನಡುವಿನ ಚುನಾವಣೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ವಾಗ್ದಾಳಿ ನಡೆಸಿದ್ದಾರೆ.ರಾಷ್ಟ್ರ ದ್ರೋಹಿಗಳು ದೇಶವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಅವರು ಚುನಾವಣಾ ಸಂದರ್ಭದಲ್ಲಿ ಸಭೆಯಲ್ಲಿ ನುಡಿದಿದ್ದಾರೆ.

ಮಂಗಳೂರು: ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್ ಇಟ್ಟುಕೊಂಡಿದೆ. ವ್ಯಕ್ತಿ ಮುಖ್ಯವಾಗಿರದೆ ಸಮಾಜದ ಕೆಲಸವನ್ನು ಒಗ್ಗಟ್ಟಿನಿಂದ ಮಾಡಬೇಕು. ಹಿಂದುತ್ವದ ವಿಚಾರಧಾರೆಯಲ್ಲಿ ಬದುಕು ನಡೆಸಿದರೆ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ. ಕಾರ್ಯಕರ್ತರ ಬೆಂಬಲ ಇಲ್ಲದೆ ಜಿಲ್ಲೆಯಲ್ಲಿ ಯಾವುದೇ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಷ್ ಚೌಟ ಹೇಳಿದರು. ಪುತ್ತೂರಿನ ಜೈನ ಭವನ ದಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ತುಳುನಾಡಿನ ದೈವ ದೇವರ ಆಶೀರ್ವಾದಿಂದ ಟಿಕೆಟ್ ಲಭಿಸಿದೆ. ಯಾವುದೇ ಭ್ರಮೆಯಲ್ಲಿ ಇರದೆ, ಹಿಂದುತ್ವದ ವಿಚಾರದಲ್ಲಿ ಸ್ಪಷ್ಟವಾಗಿದ್ದೇವೆ. ದಕ್ಷಿಣ ಕನ್ನಡ ದೇವರು ಪ್ರೀತಿಸುವ ಜಿಲ್ಲೆಯಾಗಿದ್ದು, ಇಲ್ಲಿನ ಜನರು ಸಾಮರ್ಥ್ಯವಂತರಾಗಿದ್ದಾರೆ. ಮುಂದಿನ 25ವರ್ಷ ಭಾರತದ ಅಮೃತ ಕಾಲವಾಗಿದ್ದು, ಜನರಿಗೆ ಸಾಧನೆಗಳಿಗೆ ವೇದಿಕೆ ನೀಡುವ ಕಾರ್ಯ ಮಾಡಲಾಗುವುದು. ಕಾರ್ಯಕರ್ತರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಾಗುವುದು. ಕಾರ್ಯಕರ್ತರ ಚುನಾವಣೆಯಾಗಿದ್ದು, ಮೋದಿಗೆ ಶಕ್ತಿ ತುಂಬುವ ಕಾರ್ಯವಾಗಬೇಕು. ಕನಸಿನ ದಕ್ಷಿಣ ಕನ್ನಡ ನಿರ್ಮಾಣವನ್ನು ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರಬೇಕು ಎಂದರು

ರಾಜ್ಯವನ್ನು ದಿವಾಳಿಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಡಾ. ವೈ ಭರತ್ ಶೆಟ್ಟಿ

ಮಂಗಳೂರು: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.

ಪ್ರಜಾಪ್ರಭುತ್ವದ ದೇಗುಲವೆನಿಸಿದ ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮ ಜರುಗಿಸದೆ ದೇಶ ವಿರೋಧಿ ನೀತಿ ಅನುಸರಿಸಿರುವುದು ಸ್ಪಷ್ಟವಾಗಿದೆ. ಆದರೆ ಗೋಹಂತಕರ ವಿರುದ್ಧ ಹೋರಾಡುವ ಹಿಂದೂ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ಹಾಕುತ್ತಿದೆ ಎಂದು ಅವರು ಟೀಕಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಇಂದು (ಮಾ.22) ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ತನ್ನ ಗ್ಯಾರಂಟಿಗಳಿಗೆ ಹಾಗೂ ಜಾಹೀರಾತುಗಳಿಗೆ ರಾಜ್ಯದ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ. ಬೊಕ್ಕಸವನ್ನು ಬರಿದಾಗಿಸಿ ಆಡಳಿತ ವ್ಯವಸ್ಥೆಯಲ್ಲಿ ವೈಫಲ್ಯ ಉಂಟಾಗಿ ಕಾನೂನು ಸುವ್ಯವಸ್ಥೆ ಕುಸಿದು ಅರಾಜಕತೆ ಸೃಷ್ಟಿಯಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.

ಇಡೀ ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ ಬರಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಜನರು ವಲಸೆ ಹೋಗುತ್ತಿದ್ದಾರೆ. ಆದರೆ ಸರಕಾರಕ್ಕೆ ಮಾತ್ರ ರೈತರ ಬಗ್ಗೆ ಕಾಳಜಿಯಿಲ್ಲ. ಸರಕಾರ ಕೊಡುವ ಪರಿಹಾರದ ಆಸೆಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲರ ಹೇಳಿಕೆ ರೈತವಿರೋಧಿ ನಡೆಯಲ್ಲವೇ ಎಂದು ಶಾಸಕರು ಪ್ರಶ್ನಿಸಿದರುಕಾಂಗ್ರೆಸ್ ವೈಫಲ್ಯಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು:

ಹಿಂದಿನ ಯುಪಿಎ ಸರಕಾರಕ್ಕೆ ಹೋಲಿಸಿದರೆ ಕೇಂದ್ರದ ಬಿಜೆಪಿ ಸರಕಾರವು ರಾಜ್ಯಕ್ಕೆ ಶೇ 200ಕ್ಕೂ ಹೆಚ್ಚು ಮೊತ್ತವನ್ನು ಕೊಟ್ಟಿದ್ದರೂ ಕೇಂದ್ರದತ್ತ ಬೊಟ್ಟು ಮಾಡಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಿ ಜನರ ದಾರಿ ತಪ್ಪಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಭರತ್ ಶೆಟ್ಟಿ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಬಿಜೆಪಿ ಖಜಾಂಚಿ ಸಂಜಯ ಪ್ರಭು, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಹಿಳಾ ಮೋರ್ಚಾ ಉಪ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಮತ್ತು ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist