ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Lok Sabha Election: ಮುಂದಿನ ಗುರುವಾರ ಅಥವಾ ಶುಕ್ರವಾರ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ ಸಾಧ್ಯತೆ.!

Twitter
Facebook
LinkedIn
WhatsApp
Lok Sabha Election: ಮುಂದಿನ ಗುರುವಾರ ಅಥವಾ ಶುಕ್ರವಾರ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ ಸಾಧ್ಯತೆ.!

ಭಾರತೀಯ ಚುನಾವಣಾ ಆಯೋಗವು (Election Commission of India) ಸೋಮವಾರದಿಂದ ಬುಧವಾರದವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಭೇಟಿ ನೀಡಲಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಯಾವಾಗ ಚುನಾವಣೆ ನಡೆಸಬಹುದು ಎಂಬುದನ್ನು ನಿರ್ಣಯಿಸಲಿದೆ. ಅದರ ಬೆನ್ನಲ್ಲೇ, ಲೋಕಸಭೆ ಚುನಾವಣೆಯ (Lok Sabha Elections) ದಿನಾಂಕಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಅಥವಾ ಶುಕ್ರವಾರ ಚುನಾವಣಾ ದಿನಾಂಕ ಪ್ರಕಟವಾಗಬಹುದು ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸೆಪ್ಟೆಂಬರ್‌ನೊಳಗೆ ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ನಂತರ ಆಯೋಗ ಅಲ್ಲಿಗೆ ಭೇಟಿ ನೀಡುತ್ತಿದೆ. ಈ ಮಧ್ಯೆ, ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯನ್ನು ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ನಡೆಸಬಹುದೇ ಎಂದು ನಿರ್ಣಯಿಸಲು ಕೇಂದ್ರವು ಸಮಿತಿಯನ್ನು ಕೇಳಿತ್ತು.

ಅಂತಿಮ ಹಂತದ ಪರಿಶೀಲನೆಗಳನ್ನು ಪೂರ್ಣಗೊಳಿಸಿಕೊಂಡು, ಜಮ್ಮು ಕಾಶ್ಮೀರ ಭೇಟಿ ಮುಕ್ತಾಯಗೊಂಡ ನಂತರ ಚುನಾವಣಾ ಆಯೋಗವು ಗುರುವಾರ ಅಥವಾ ಶುಕ್ರವಾರ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ‘ಎನ್​ಡಿಟಿವಿ’ ವರದಿ ಮಾಡಿದೆ.

ಚುನಾವಣೆ ಘೋಷಣೆಯಾದ ತಕ್ಷಣ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಮತದಾರರಿಗೆ ಭರವಸೆಗಳನ್ನು ನೀಡುತ್ತಿದ್ದು, ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಚುನಾವಣೆಗೆ ಸಂಬಂಧಿಸಿದಂತೆ, ಭದ್ರತಾ ವ್ಯವಸ್ಥೆ ಬಗ್ಗೆ ಆಯೋಗಕ್ಕೆ ಈಗಾಗಲೇ ಸಂಪೂರ್ಣ ಮಾಹಿತಿ ನೀಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಸೇರಿದಂತೆ ಇಡೀ ಸಮಿತಿಯು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist