ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆ ಚುನಾವಣೆ: ಮಾರ್ಚ್ 15 ರ ಬಳಿಕ ಕರ್ನಾಟಕದಲ್ಲಿ ಮೋದಿ ಪ್ರಚಾರ..!

Twitter
Facebook
LinkedIn
WhatsApp
ಲೋಕಸಭೆ ಚುನಾವಣೆ: ಮಾರ್ಚ್ 15 ರ ಬಳಿಕ ಕರ್ನಾಟಕದಲ್ಲಿ ಮೋದಿ ಪ್ರಚಾರ..!

ಬೆಂಗಳೂರು ಮಾರ್ಚ್ 11: ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಅದಾಗಲೇ ಪ್ರಬಲ ಪಕ್ಷಗಳು ಕೇಂದ್ರ ನಾಯಕರ ಮೂಲಕ ಮತದಾರರನ್ನು ಸೆಳೆಯುತ್ತ ಚಿಂತನೆ ನಡೆಸಿವೆ. ಈ ನಿಟ್ಟಿನಲ್ಲಿ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತದಾರರ ಗಮನ ಸೆಳೆಯಲು ಕರ್ನಾಟಕದಲ್ಲಿ ಪ್ರಧಾನಿ ಮೋದಿ ಅವರು ಪ್ರಚಾರ ಮಾಡುವ ಸಾಧ್ಯತೆ ಇದೆ.

 ಕರ್ನಾಟಕದಲ್ಲಿ ಮಾರ್ಚ್ 15ರಿಂದ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಚುನಾವಣೆ ಪ್ರಚಾರಕ್ಕಾಗಿ ಮೋದಿ ಅವರ ಪ್ರಚಾರ ಪ್ರವಾಸದ ತಾತ್ಕಾಲಿಕ ಪಟ್ಟಿಯೊಂದು ಸಿದ್ಧಗೊಂಡಿದ್ದು, ಅದರ ಪ್ರಕಾರ ಮಾರ್ಚ್ 15ರಿಂದ ಮಾರ್ಚ್ 19ರವರೆಗೆ ನಮೋ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಸಂಚಾರಿಸಿ ಪ್ರಚಾರ ಮಾಡಲಿದ್ದಾರೆ.

ಹೀಗಾಗಿ ಕರ್ನಾಟಕದಲ್ಲಿ ಈ ಬಾರಿ ಲೋಕಸಭಾ ಚುನಾವಣೆಗೆ ಮೋದಿ ಪ್ರಚಾರ ಈಗಾಗಲೇ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಆಡಳಿತ ವಿರೋಧಿ ಅಂಶಗಳನ್ನು ಎದುರಿಸುತ್ತಿರುವ ರಾಜ್ಯದ ಆಡಳಿತಾರೂಢ ಬಿಜೆಪಿಯು ದೇಶದ ದಕ್ಷಿಣ ಭಾಗದಲ್ಲಿ ತನ್ನ ಕೋಟೆ ಕಟ್ಟಲು ನಿರ್ಧರಿಸಿದೆ. ಇದಕ್ಕಾಗಿ ಮೋದಿ ಪ್ರಚಾರದ ಹವಾ ಸೃಷ್ಟಿಸಲು ಪಕ್ಷ ತೀರ್ಮಾನಿಸಿದೆ. ತಾತ್ಕಾಲಿಕ ಪಟ್ಟಿ ಪ್ರಕಾರ ಮೋದಿಯವರು ಮಾರ್ಚ್​ 15ಕ್ಕೆ ಕೋಲಾರ, ಮಾರ್ಚ್​ 17ಕ್ಕೆ ಶಿವಮೊಗ್ಗ, ಮಾರ್ಚ್​ 18ಕ್ಕೆ ಬೀದರ್​​, ಮಾರ್ಚ್​ 19ಕ್ಕೆ ಧಾರವಾಡದಲ್ಲಿ ಪ್ರಚಾರ ನಡೆಸಲಿದ್ದಾರೆ ಎನ್ನಲಾಗುತ್ತದೆ. ಈ ಪೈಕಿ ರಾಜ್ಯದ 4 ಜಿಲ್ಲೆಗಳಲ್ಲಿ ಅದರ ಸುತ್ತಮುತ್ತಲಿನ ಕ್ಷೇತ್ರದವರೂ ಭಾಗಿಯಾಗಲಿದ್ದಾರೆ. ಆದರೆ ಚುನಾವಣೆ ದಿನಾಂಕ ನಿಗದಿ ಆಧಾರದ ಮೇಲೆ ಪಟ್ಟಿಯಲ್ಲಿ ಬದಲಾವಣೆಯಾಗುವುದು ಎನ್ನಲಾಗಿದೆ.

ಹೀಗೆ ರಾಜ್ಯದಲ್ಲಿ ತನ್ನ ಪ್ರಮುಖ ಪ್ರತಿಸ್ಪರ್ಧಿಯಾದ ಕಾಂಗ್ರೆಸ್ ಅನ್ನು ಸೋಲಿಸಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಪಕ್ಷದ ಸ್ವಂತ ದಾಖಲೆಗಳ ಪ್ರಕಾರ, ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ರಾಜ್ಯಾದ್ಯಂತ ಒಟ್ಟು 3116 ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿತ್ತು. ಪಕ್ಷದ ಸ್ವಂತ ಅಂದಾಜಿನ ಪ್ರಕಾರ ರಾಜ್ಯದಲ್ಲಿ ದೇವಸ್ಥಾನಗಳು ಮತ್ತು ಮಠಗಳಿಗೆ ಪಕ್ಷದ ನಾಯಕರು 311 ಭೇಟಿಗಳು, 9125 ಸಾರ್ವಜನಿಕ ಸಭೆಗಳು, 1377 ರೋಡ್‌ಶೋಗಳನ್ನು ನಡೆಸಿದ್ದಾರೆ, ಜೊತೆಗೆ 9077 ಬೀದಿ ಸಭೆಗಳನ್ನು ರಾಜ್ಯಾದ್ಯಂತ ನಡೆಸಲಾಗಿದೆ.ಮೋದಿ ಅವರು ಕೇಸರಿ ಪಕ್ಷದ ಮುಖ್ಯ ಪ್ರಚಾರಕರಾಗಿದ್ದಾಗ, 15 ಕೇಂದ್ರ ಸಚಿವರು (ಪ್ರಧಾನಿ ಹೊರತುಪಡಿಸಿ) ಸೇರಿದಂತೆ ಒಟ್ಟು 128 ರಾಷ್ಟ್ರೀಯ ನಾಯಕರು ಈ ಚುನಾವಣಾ ಋತುವಿನಲ್ಲಿ ಕರ್ನಾಟಕದಲ್ಲಿ ಪ್ರಚಾರವನ್ನು ಮಾಡಿದರು. 26 ಮೋದಿ ಶೋಗಳ ಹೊರತಾಗಿ, ಗೃಹ ಸಚಿವ ಅಮಿತ್ ಶಾ ಅವರು 16 ರ‍್ಯಾಲಿಗಳು ಮತ್ತು 15 ರೋಡ್ ಶೋಗಳು ಸೇರಿದಂತೆ ಅತಿ ಹೆಚ್ಚು ಸಾರ್ವಜನಿಕ ಪ್ರಚಾರಗಳನ್ನು ನಡೆಸಿದರು. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು 10 ರ‍್ಯಾಲಿಗಳು ಮತ್ತು 16 ರೋಡ್ ಶೋಗಳನ್ನು ನಡೆಸಿದರು. ಕೇಂದ್ರ ಸಚಿವೆ ಸ್ಮೃತಿ ಇರಾನಿ 17 ಸಾರ್ವಜನಿಕ ಸಭೆಗಳು ಮತ್ತು ಎರಡು ರೋಡ್ ಶೋಗಳನ್ನು ಉದ್ದೇಶಿಸಿ ಮಾತನಾಡಿದರು.
ಅಲ್ಲದೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಯೋಗಿ ಆದಿತ್ಯನಾಥ್ (ಯುಪಿ) ಒಂಬತ್ತು ರ‍್ಯಾಲಿಗಳು ಮತ್ತು ಮೂರು ರೋಡ್ ಶೋಗಳನ್ನು ನಡೆಸಿದರು. ಹಿಮಂತ ಬಿಸ್ವಾ ಶರ್ಮಾ (ಅಸ್ಸಾಂ) 15 ರ‍್ಯಾಲಿಗಳು ಮತ್ತು ಒಂದು ರೋಡ್ ಶೋ ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist