ಲೋಕಸಭೆ ಚುನಾವಣೆ 2024:ಮಂಗಳೂರು ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜೆಷ್ ಚೌಟ ಬಹುತೇಕ ಅಂತಿಮ?
Twitter
Facebook
LinkedIn
WhatsApp
ಮಂಗಳೂರು: ಲೋಕಸಭೆ ಚುನಾವಣೆ 2024 ಮಂಗಳೂರು ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೆಷ್ ಚೌಟ ಬಹುತೇಕ ಅಂತಿಮಗೊಂಡಿದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
ಚೌಟ ರವರಿಗೆ ಬಿಜೆಪಿ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಆದರೆ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಹೈಕಮಾಂಡ್ ಈ ವಿಷಯದಲ್ಲಿ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎನ್ನಲಾಗಿದೆ.