ಶನಿವಾರ, ಡಿಸೆಂಬರ್ 14, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?

Twitter
Facebook
LinkedIn
WhatsApp
ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?

ಮಂಗಳೂರು: ಸಚಿವ ಮಧು ಬಂಗಾರಪ್ಪ ನಡೆಸಿದ ಅಭಿಪ್ರಾಯ ಸಂಗ್ರಹಣೆಯಲ್ಲಿ ಅಚ್ಚರಿಯ ರೀತಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೆಸರು ಹಾಗೂ ಮಾಜಿ ಸಚಿವರ ರಮಾನಾಥ ರೈ ಹೆಸರು ಮುಂಚೂಣಿಗೆ ಬಂದಿರುವುದು ಹೈಕಮಾಂಡ್ ಅವರನ್ನು ಅಭ್ಯರ್ಥಿಯಾಗಿಸುವ ಗಂಭೀರ ಯೋಚನೆಯಲ್ಲಿ ಇದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಮಾಜಿ ಸಚಿವ ರಮನಾಥ ರೈ ಹಾಗೂ ಹರೀಶ್ ಕುಮಾರ್ ರವರ ಹೆಸರನ್ನು ಬಹುತೇಕ ಕಾರ್ಯಕರ್ತರು ಪ್ರಸ್ತಾಪಿಸಿದ್ದಾರೆ. ಆದರೆ ಉಡುಪಿಯಲ್ಲಿ ಬಂಟ ಸಮುದಾಯದ ಜಯಪ್ರಕಾಶ್ ಹೆಗ್ಡೆ ರವರಿಗೆ ಉಡುಪಿ ಚಿಕ್ಕಮಗಳೂರು ಟಿಕೆಟ್ ಪಕ್ಕ ಎನ್ನಲಾಗುತ್ತಿದೆ.ಈ ಬೆಳವಣಿಗೆಯ ನಡುವೆ ಹರೀಶ್ ಕುಮಾರ್ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದು ಖಚಿತ ಎನ್ನಲಾಗುತ್ತದೆ. ಒಂದು ವೇಳೆ ಉಡುಪಿಗೆ ಬಿಲ್ಲವ ಸಮುದಾಯದ ವಿನಯ್ ಕುಮಾರ್ ಸೊರಕೆಗೆ ಟಿಕೆಟ್ ನೀಡಿದರೆ ಮಂಗಳೂರಿನಲ್ಲಿ ರಮಾನಾಥ ರೈ ರವರಿಗೆ ಟಿಕೆಟ್ ಪಕ್ಕ ಎನ್ನಲಾಗುತ್ತಿದೆ.

ಹೈಕಮಾಂಡ್ ಮೂಲದ ಉನ್ನತ ನಾಯಕರ ಪ್ರಕಾರ ಹರೀಶ್ ಕುಮಾರ್ ಹಾಗೂ ರಮಾನಾಥ ರೈ ಹೆಸರು ಹೈಕಮಾಂಡ್ ಗಂಭೀರ ಪರಿಶೀಲನೆಯಲ್ಲಿ ಇದೆ ಎಂದು ತಿಳಿದು ಬಂದಿದೆ.

ಸಮನ್ವಯದಿಂದ ಎಲ್ಲರನ್ನು ಜೊತೆಯಾಗಿ ತೆಗೆದುಕೊಂಡು ಹೋಗುವ ಮನೋಭಾವದಿಂದ ಜಿಲ್ಲೆಯ ಬಹುತೇಕ ಕಾರ್ಯಕರ್ತರು ಹರೀಶ್ ಕುಮಾರ್ ಅವರ ಹೆಸರನ್ನು ಸೂಚಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಮಾಜಿ ಸಚಿವ ರಮಾನಾಥ ರೈ ಪಕ್ಷದ ಬಹುತೇಕ ಭಾಗದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಹೊಂದಿರುವುದು ಅವರಿಗೆ ಪ್ಲಸ್ ಆಗಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಇನ್ನು ಕೇವಲ ಐದು ತಿಂಗಳ ಬಾಕಿ ಉಳಿದಿದ್ದು ಬಿಜೆಪಿಯಿಂದ ನಳಿನ್ ಕುಮಾರ್ ವಿರುದ್ಧ ಹರೀಶ್ ಕುಮಾರ್ ಅಥವಾ ರಮಾನಾಥ ರೈ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಮತ್ತೆ ಸ್ವಪಕ್ಷದ ವಿರುದ್ದ ಸಿಡಿದೆದ್ದ ಯತ್ನಾಳ್ ; ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ..!

ಬೆಳಗಾವಿ: ಇದೀಗ ಮತ್ತೊಮ್ಮೆ ಸ್ವ ಪಕ್ಷ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತಿರುಗಿ ಬಿದ್ದಿದ್ದು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ್ದಾರೆ.

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ.

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು. ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು. , ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist