ಲೋಕಸಭಾ ಚುನಾವಣೆ 2024: ತುಮಕೂರಿನಲ್ಲಿ ಬಹುತೇಕ ಸರ್ವೇಗಳಲ್ಲಿ ನಿಕೇತ್ ರಾಜ್ ಮೌರ್ಯ ಮುಂಚೂಣಿಯಲ್ಲಿ
Twitter
Facebook
LinkedIn
WhatsApp
ತುಮಕೂರು: ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತ ಕಾಂಗ್ರೆಸ್ನ ಬಹುತೇಕ ಸರ್ವೇಗಳಲ್ಲಿ ತುಮಕೂರು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಿಕೇತ್ ರಾಜ್ ಮೌರ್ಯ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ನಡೆಸಿದ ಮೂರು ಸರ್ವೆಗಳಲ್ಲಿ ನಿಕೇತ್ ರಾಜ್ ಮೌರ್ಯ ಹೆಸರು ಜಯಗಳಿಸುವ ಅಭ್ಯರ್ಥಿಗಳ ಪೈಕಿ ಮುಂಚೂಣಿಯಲ್ಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
ನಿಕೇತ್ ರಾಜ್ ಮೌರ್ಯ ತನ್ನ ಹೊಸ ಆಲೋಚನೆಯ ಅಭಿವೃದ್ಧಿ ಚಿಂತನೆಗಳ ಮೂಲಕ ಇಡೀ ತುಮಕೂರಿನ ಜನತೆಯ ಗಮನ ಸೆಳೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪನ್ನು ತಂದಿದೆ ಎಂದು ವರದಿಯಾಗಿದೆ.
ಈ ತಿಂಗಳ ಹತ್ತರ ಆಸುಪಾಸಿನಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರು ಘೋಷಣೆ ಹಾಗೂ ಸಂಭವ ಇದೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದು ಬಂದಿದೆ.