ಭಾನುವಾರ, ಮೇ 5, 2024
ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಸಭಾ ಚುನಾವಣೆ: ಬಿಜೆಪಿಯ ವಿನೂತನ ತಂತ್ರ; ಏನಿದು ಬೀದಿಬದಿ, ಕಟ್ಟೆ ಸಭೆ ?

Twitter
Facebook
LinkedIn
WhatsApp
ಲೋಕಸಭಾ ಚುನಾವಣೆ: ಬಿಜೆಪಿಯ ವಿನೋತನ ತಂತ್ರ; ಏನಿದು ಬೀದಿಬದಿ, ಕಟ್ಟೆ ಸಭೆ ?

ರಾಜ್ಯದಲ್ಲಿ ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುವ, 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಮನೆಗಳನ್ನು ಎಪ್ರಿಲ್‌ 5ರೊಳಗೆ ತಲುಪುವುದಕ್ಕೆ ಬಿಜೆಪಿ ಕಾರ್ಯ ತಂತ್ರ ರೂಪಿಸಿದೆ. ಈ ಬಾರಿ ವಿನೂತನ ಕಟ್ಟೆ ಸಭೆ ಹಾಗೂ ಬೀದಿಬದಿ ಸಭೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಿದೆ.ಸ್ಥಳೀಯ ಮಟ್ಟದಲ್ಲಿ ಸಣ್ಣಮಟ್ಟಿನ ಜನ ಸಮುದಾಯವನ್ನು ತಲುಪಿ ಪ್ರಚಾರ ಮಾಡುವವ ನಿಟ್ಟಿನಲ್ಲಿ ಕರ್ನಾಟಕದಲ್ಲಿ (Karnataka) ಬಿಜೆಪಿ (BJP) ಇದೇ ಮೊದಲ ಬಾರಿಗೆ ‘ನೋ ಮೈಕ್, ನೋ ಚೇರ್ಸ್’ ಅಭಿಯಾನ ಹಮ್ಮಿಕೊಂಡಿದೆ. ತಳಮಟ್ಟದಲ್ಲಿ ಜನರನ್ನು ತಲುಪುವ ಉದ್ದೇಶದೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಏಪ್ರಿಲ್ 5ರ ಒಳಗೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಚುನಾವಣಾ ಪ್ರಚಾರ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಅಭಿಯಾನದಡಿ ರಸ್ತೆ ಬದಿಗಳಲ್ಲಿ, ಸಣ್ಣಪುಟ್ಟ ಹಳ್ಳಿಗಳ ಮರಗಳ ಅಡಿಯಲ್ಲಿ ಅಥವಾ ಮನೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಗುತ್ತದೆ. ಒಂದು ಬಾರಿಯ ಸಭೆಯ ವೇಳೆ ಸುಮಾರು ನೂರು ಜನರನ್ನು ತಲುಪುವ ಗುರಿ ಹೊಂದಲಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯ ದರ್ಶಿ ಜಿ.ವಿ. ರಾಜೇಶ್‌ ಹಾಗೂ ಚುನಾ ವಣೆ ನಿರ್ವಹಣೆ ಸಮಿತಿ ಸಂಚಾಲಕ ವಿ. ಸುನೀಲ್‌ ಕುಮಾರ್‌ ನೇತೃತ್ವದಲ್ಲಿ ನಡೆದ, ವಿವಿಧ ಪ್ರಕೋಷ್ಠಗಳ ಸಭೆಯಲ್ಲಿ ಲೋಕ ಸಭಾ ಚುನಾವಣೆಯ ಪ್ರಚಾರ ತಂತ್ರಗಳ ಸ್ವರೂಪ ಹೇಗಿರ ಬೇಕೆಂಬ ಬಗ್ಗೆ ವಿವರಣೆ ನೀಡಲಾಗಿದೆ. ಎ.5ರೊಳಗೆ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ (ಮಂಡಲ) ಕಾರ್ಯಕರ್ತರ ಸಭೆ ಪೂರ್ಣಗೊಳಿಸುವಂತೆ ಹಾಗೂ ಮೊದಲ ಹಂತದಲ್ಲಿ ಚುನಾವಣೆ ನಡೆಯುವಲ್ಲಿ ಜನಸಂಪರ್ಕ ಸಭೆಯನ್ನೂ ಪೂರ್ಣಗೊಳಿಸಲು ಸೂಚಿಸಲಾಗಿದೆ.ಬಿಜೆಪಿಯಲ್ಲಿ ಒಟ್ಟು 22 ಪ್ರಕೋಷ್ಠಗಳಿವೆ. ಚುನಾ ವಣೆ ಮುಕ್ತಾಯಗೊಳ್ಳುವವರೆಗೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಪ್ರಕೋಷ್ಠಗಳ ತಲಾ 22 ಸಣ್ಣಸಣ್ಣ ಸಮಾವೇಶ ನಡೆಸುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ನಿರ್ಧರಿಸಲಾಗಿದೆ. ಈ ಸಣ್ಣ ಸಭೆಗಳು ಪ್ರತ್ಯೇಕವಾಗಿ ನಡೆಯುವುದರಿಂದ ಪ್ರಚಾರ ಕಾರ್ಯವನ್ನು ನಿರಂತರವಾಗಿ ಇರಿಸಬಹುದೆಂಬುದು ಬಿಜೆಪಿ ಲೆಕ್ಕಾಚಾರ.

ದೊಡ್ಡ ದೊಡ್ಡ ರ‍್ಯಾಲಿಗಳನ್ನು ನಡೆಸುವ ಬದಲು ಸಣ್ಣಪುಟ್ಟ ಸಭೆಗಳನ್ನು ನಡೆಸುವ ಮೂಲಕ ಜನರನ್ನು ತಲುಪುವುದು ಉತ್ತಮ ವಿಧಾನವಾಗಿದೆ. ಈ ಮೂಲಕ ಪ್ರತಿಯೊಬ್ಬರಿಗೂ ನಾವು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬಹುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರ ಹೇಳಿಕೆ ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಈ ರೀತಿಯ ಚುನಾವಣಾ ಪ್ರಚಾರ ನಡೆಸುವ ಬಗ್ಗೆ ಬುಧವಾರ ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿವಿಧ ಹಂತಗಳಲ್ಲಿ ಚುನಾವಣಾ ಪ್ರಚಾರ ಅಭಿಯಾನದ ರೀತಿಯನ್ನು ಪಕ್ಷ ಬದಲಾಯಿಸಿದೆ. 8 ಕ್ಲಸ್ಟರ್​​ಗಳಲ್ಲಿ ದೊಡ್ಡ ಅಭಿಯಾನಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಈಗಾಗಲೇ ಬೃಹತ್ ಪ್ರಚಾರ ನಡೆಸಲಾಗಿದೆ. ದೊಡ್ಡ ಪ್ರಚಾರ ಅಭಿಯಾನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರಂಥ ನಾಯಕರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಣ್ಣ ಮಟ್ಟದ ಸ್ಥಳೀಯ ಚುನಾವಣಾ ಪ್ರಚಾರ ಸಭೆಗಳಿಗೆ ಪಕ್ಷದ ರಾಜ್ಯ ಘಟಕವು 22 ವಿವಿಧ ಘಟಕಗಳನ್ನು ಸ್ಥಾಪಿಸಿದೆ. ಇದರಲ್ಲಿ ರೈತರು, ವಕೀಲರು, ವೈದ್ಯರು ಹಾಗೂ ಕೇಂದ್ರ ಸರ್ಕಾರ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ.

ಸ್ಥಳೀಯ ನಾಯಕರ ಸಹಕಾರದೊಂದಿಗೆ ಈ ಹೊಸ ಪ್ರಚಾರದ ಪರಿಕಲ್ಪನೆಯನ್ನು ನಾವು ಸಾಕಾರ ಗೊಳಿಸಲಿದ್ದೇವೆ. ಇಂಥ ಪ್ರಚಾರ ಸಭೆಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ನಾಯಕರು, ಪದಾಧಿಕಾರಿಗಳು ಹಾಗೂ ಇತರರು ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸರ್ಕಾರದ ಉಜ್ವಲ, ಜಲಜೀವನ್ ಮಿಷನ್ ಹಾಗೂ ಇತರ ಯೋಜನೆಗಳನ್ನು ಮುಂದಿಟ್ಟುಕೊಂಡು ಮಹಿಳಾ ಮತದಾರರ ಬಳಿ ಮತಯಾಚನೆ ಮಾಡಲಿದ್ದೇವೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಉಭಯ ಪಕ್ಷಗಳ ನಡುವೆ ಮೂಡುವ ವೈಮನಸ್ಸು ಹಾಗೂ ಗೊಂದಲಗಳನ್ನು ಪರಿಹರಿಸುವ ಸಲುವಾಗಿ ಸಮನ್ವಯ ಸಮಿತಿಯನ್ನು ರಚಿಸಲು ಉದ್ದೇಶಿಸಲಾಗಿದೆ. ಸಮಿತಿಯಲ್ಲಿ ಎರಡು ಪಕ್ಷಗಳ ನಾಯಕರು ಇರಲಿದ್ದಾರೆ. ಕ್ಷೇತ್ರ ಮಟ್ಟದಲ್ಲಿ ಈ ನಾಯಕರು ಕಾರ್ಯನಿರ್ವಹಿಸಲಿದ್ದಾರೆ.

ಜತೆಗೆ ಎಲ್ಲ ಲೋಕಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ಕಟ್ಟೆ ಸಭೆ ಹಾಗೂ ಬೀದಿ ಬದಿ ಸಭೆ ನಡೆಸಲಾಗುತ್ತದೆ. ಇದು ಸಣ್ಣಸಣ್ಣ ಗುಂಪುಗಳ ಮೇಲೆ ಪ್ರಭಾವ ಬೀರಲು ನೆರವಾಗುತ್ತದೆ. ಇದಕ್ಕೆೆ ಬೇಕಾದಷ್ಟು ಚರ್ಚೆ ವಿಚಾರಗಳು ಕೇಂದ್ರ ಹಾಗೂ ರಾಜ್ಯಮಟ್ಟದಲ್ಲಿ ಸಾಕಷ್ಟಿವೆ. ಕೇಂದ್ರದ ಸಾಧನೆ ಜತೆಗೆ ರಾಜ್ಯದ ವೈಫ‌Âಲ್ಯ ವನ್ನೂ ಜನರಿಗೆ ತಿಳಿಸಲು ಅನುಕೂಲವಾಗುತ್ತದೆ.

ದೇವೇಗೌಡರ ಮೆಟೀರಿಯಲ್​ಗೆ ಬಿಜೆಪಿ ಸ್ಟಿಕ್ಕರ್ ಅಂಟಿಸಿರುವುದನ್ನು ನೀವು ಒಪ್ಪುತ್ತೀರಾ ಎಂದು ಒಕ್ಕಲಿಗರ ಸಂಘದವರು ನನ್ನ ಕೇಳಿದರು. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕರು ಬದಲಾಗುತ್ತಾರೆ ಅಂತಾ ಈಶ್ವರಪ್ಪ ಹೇಳಿದ್ದಾರೆ. ನೀವು ಅರ್ಥ ಮಾಡಿಕೊಳ್ಳಿ. ರಾಜ್ಯದ ಬೆಳವಣಿಗೆ ಬಗ್ಗೆ, ಕುಟುಂಬವಾದದ ಬಗ್ಗೆ ನಾನು ಹೈಕಮಾಂಡ್​ಗೆ ಹೇಳಲು ಹೋಗಲ್ಲ. ಮಾಧ್ಯಮದಲ್ಲಿ ನೋಡಿ ಅವರೇ ತಿಳಿದುಕೊಳ್ಳುತ್ತಾರೆ ಎಂದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ