ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆ ಚುನಾವಣೆ: 5 ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್ ; ಮಹಿಳೆಯರಿಗೆ ನಾರಿ ನ್ಯಾಯ ಯೋಜನೆ ಸೇರಿ ಪ್ರಣಾಳಿಕೆಯಲ್ಲಿ ಏನೇನಿದೆ?

Twitter
Facebook
LinkedIn
WhatsApp
Pinterest
ಲೋಕಸಭೆ ಚುನಾವಣೆ: 5 ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್ ; ಮಹಿಳೆಯರಿಗೆ ನಾರಿ ನ್ಯಾಯ ಯೋಜನೆ ಸೇರಿ ಪ್ರಣಾಳಿಕೆಯಲ್ಲಿ ಏನೇನಿದೆ?

ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 5 ಘೋಷಣೆಗಳನ್ನು ಮಾಡಿದ್ದಾರೆ. ಈ ಯೋಜನೆಗಳಿಗೆ ‘ನಾರಿ ನ್ಯಾಯ’  ಯೋಜನೆ ಎಂದು ನಾಮಕರಣ ಮಾಡಲಾಗಿದೆ. ಈ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರ ಅಡಿಯಲ್ಲಿ ಕಾಂಗ್ರೆಸ್ ಬಡ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದೆ. ಅಲ್ಲದೇ ಸರ್ಕಾರಿ ನೇಮಕಾತಿಯಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕು ನೀಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಘೋಷಣೆ ಮಾಡಿದ 5 ಯೋಜನೆಗಳು 

1. ಮಹಾಲಕ್ಷ್ಮಿ ಗ್ಯಾರಂಟಿ: ಇದರ ಅಡಿಯಲ್ಲಿ, ಬಡ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ನೀಡಲಾಗುತ್ತದೆ. 

2. ಆದಿ ಆಬಾಧಿ ಪೂರಾ ಹಕ್: ಇದರ ಅಡಿಯಲ್ಲಿ, ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕುಗಳು ಸಿಗುತ್ತವೆ.

3. ಶಕ್ತಿ ಕಾ ಸಮ್ಮಾನ್: ಈ ಯೋಜನೆಯಡಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು.

4. ಅಧಿಕಾರ ಮೈತ್ರಿ: ಇದರ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಪ್ಯಾರಾ-ಲೀಗಲ್ ಅಂದರೆ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿಯಾಗಿ ನೇಮಿಸಲಾಗುತ್ತದೆ.

5. ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್: ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಕನಿಷ್ಠ ಒಂದು ಹಾಸ್ಟೆಲ್ ಅನ್ನು ನಿರ್ಮಿಸಲಾಗುವುದು ಮತ್ತು ಇಡೀ ದೇಶದಲ್ಲಿ ಈ ಹಾಸ್ಟೆಲ್ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು.

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು? ನಮ್ಮ ಖಾಗತಿಗಳಲ್ಲಿರುವುದು ಸುಳ್ಳು ಭರವಸೆಗಳಲ್ಲ, ಪಕ್ಷದ ಹಿರಿಯ ನಾಯಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೆ ಸರಿಯುತ್ತಿದ್ದಾರೆ ಎಂಬ ಆರೋಪವನ್ನು ಮಂಗಳವಾರ ಖರ್ಗೆ ತಳ್ಳಿ ಹಾಕಿದ್ದರು.ಕಾರ್ಯಕರ್ತರು ಅವರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಕೇಳಿದರೆ ಸ್ಪರ್ಧಿಸುತ್ತೇನೆ ಎಂದರು.

ವಯಸ್ಸಾದ ಕಾರಣ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, 2009 ಮತ್ತು 2014ರಲ್ಲಿ ಕರ್ನಾಟಕದ ಕಲಬುರಗಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಖರ್ಗೆ 2019ರಲ್ಲಿ ಸೋತಿದ್ದರು. ಕಾಂಗ್ರೆಸ್ ಟಿಕೆಟ್ ಮಂಗಳವಾರ (ಮಾರ್ಚ್ 12) ಲೋಕಸಭೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಅದರಲ್ಲಿ 43 ಅಭ್ಯರ್ಥಿಗಳ ಹೆಸರಿದೆ.

ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರಿಗೆ ಚಿಂದ್ವಾರದಿಂದ ಮತ್ತು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ಜಲೋರ್ ನಿಂದ ಟಿಕೆಟ್ ನೀಡಲಾಗಿದೆ.

ಈ ಹಿಂದೆ ಮಾರ್ಚ್ 8 ರಂದು ಬಿಡುಗಡೆಯಾದ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 39 ಹೆಸರುಗಳನ್ನು ಪ್ರಕಟಿಸಲಾಗಿತ್ತು. ಈ ಮೂಲಕ ಕಾಂಗ್ರೆಸ್ ಇದುವರೆಗೆ 82 ಹೆಸರುಗಳನ್ನು ಪ್ರಕಟಿಸಿದೆ. ಪಟ್ಟಿಯಲ್ಲಿರುವ 76.7% ಅಭ್ಯರ್ಥಿಗಳು 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist