ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Loksabha Election : ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಯಾವಾಗ?

Twitter
Facebook
LinkedIn
WhatsApp
Loksabha Election : ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಯಾವಾಗ?

ನವದೆಹಲಿ: ಭಾರತದ ಚುನಾವಣಾ ಆಯೋಗ (Election Commission of India) ಮಾರ್ಚ್ ಎರಡನೇ ವಾರದಲ್ಲಿ ಲೋಕಸಭಾ ಚುನಾವಣೆಯ (Lok Sabha Election) ದಿನಾಂಕವನ್ನು ಘೋಷಿಸುವ ಸಾಧ್ಯತೆಯಿದೆ. ಚುನಾವಣಾ ಸಮಿತಿಯ ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆಗಾಗಿ ಶೀಘ್ರದಲ್ಲಿಯೇ ವಿವಿಧ ರಾಜ್ಯಗಳಿಗೆ ತೆರಳಲಿದ್ದಾರೆ. ಮೂಲಗಳ ಪ್ರಕಾರ, ಮಾರ್ಚ್ 9ರ ನಂತರ ಸಂಸದೀಯ ಚುನಾವಣಾ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ.

2024ರ ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳಲ್ಲಿ ಏಕಕಾಲದಲ್ಲಿ ವಿಧಾನಸಭಾ ಚುನಾವಣೆ ನಡೆಸಲು ಸಿದ್ಧತೆಗಳನ್ನು ಮುಂದುವರಿಸಿರುವ ಚುನಾವಣಾ ಆಯೋಗದ ಅಧಿಕಾರಿಗಳ ತಂಡವು ಅಂತಹ ರಾಜ್ಯಗಳಿಗೆ ಪದೇ ಪದೆ ಭೇಟಿ ನೀಡುತ್ತಿದೆ. ಮೂಲಗಳ ಪ್ರಕಾರ, ಚುನಾವಣಾ ಆಯೋಗದ ಪ್ರತಿನಿಧಿಗಳು ಲೋಕಸಭಾ ಚುನಾವಣೆಯೊಂದಿಗೆ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸಬಹುದೇ ಎಂಬುದನ್ನು ಪರಿಶೀಲಿಸಲು ಮಾರ್ಚ್ 12-13ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.

2024ರ ಈ ಲೋಕಸಭಾ ಚುನಾವಣೆ 2019ರ ಲೋಕಸಭಾ ಚುನಾವಣೆಯನ್ನು ನೆನಪಿಸುವಂತಿದೆ. 2019ರ ಮಾರ್ಚ್ 10ರಂದು ಅಂದಿನ ಚುನಾವಣೆಗೆ ದಿನಾಂಕ ಘೋಷಿಸಲಾಗಿತ್ತು. ಏಪ್ರಿಲ್ 11ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆದಿದ್ದು, ಮೇ 23ರಂದು ಮತ ಎಣಿಕೆ ನಡೆದಿತ್ತು. 2014ರ ಲೋಕಸಭಾ ಚುನಾವಣೆ 9 ಹಂತದಲ್ಲಿ ನಡೆದಿತ್ತು. ಈ ಬಾರಿಯ ಎಲೆಕ್ಷನ್‌ ಎಷ್ಟು ಹಂತದಲ್ಲಿ ನಡೆಯಲಿದೆ ಎನ್ನುವುದು ತಿಳಿದು ಬಂದಿಲ್ಲ.

2019ರ ಲೋಕಸಭಾ ಚುನಾವಣೆ ವೇಳೆ ಸುಮಾರು 90 ಕೋಟಿಯಷ್ಟು ಮಂದಿ ಅರ್ಹ ಮತದಾರರಿದ್ದರು. ಆ ಪೈಕಿ ಸುಮಾರು 1.50 ಕೋಟಿಯಷ್ಟು ಮಂದಿ ಮೊದಲ ಬಾರಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದರು. ವಿಶೇಷ ಎಂದರೆ ಈ ಬಾರಿ ಅಧಿಕೃತ ಮತದಾರರ ಸಂಖ್ಯೆ 6 ಕೋಟಿಯಷ್ಟು ಏರಿಕೆ ಕಂಡಿದೆ. ಅಂದರೆ ಅರ್ಹ ಮತದಾರರ ಅಧಿಕೃತ ಸಂಖ್ಯೆ 90 ಕೋಟಿಯಿಂದ 96 ಕೋಟಿಗೆ ತಲುಪಿದೆ.

2019ರ ಫಲಿತಾಂಶ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಸ್ಥಾನಗಳ ಪೈಕಿ 353 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಹಿಡಿದಿತ್ತು. ಈ ಪೈಕಿ ಬಿಜೆಪಿ ಮಾತ್ರ 303 ಸ್ಥಾನಗಳಲ್ಲಿ ಜಯಭೇರಿ ಭಾರಿಸಿತ್ತು. ಪ್ರಮುಖ ವಿರೋಧ ಪಕ್ಷವಾದ ಐಎನ್‌ಸಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) 52 ಜಯ ಗಳಿಸಿತ್ತು. ಈ ಬಾರಿ ಎನ್‌ಡಿಎ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿ ದಾಖಲೆ ನಿರ್ಮಿಸಲು ಯೋಜನೆ ರೂಪಿಸಿದರೆ ವಿಪಕ್ಷಗಳ ಒಕ್ಕೂಟ ಇಂಡಿಯಾ (I.N.D.I.A.) ಇದಕ್ಕೆ ಅಡ್ಡಗಾಲು ಹಾಕಲು ಪ್ರತಿತಂತ್ರ ರೂಪಿಸುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ