ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Longest hair - ಅತೀ ಉದ್ದನೆಯ ಕೂದಲು: ಗಿನ್ನೆಸ್ ದಾಖಲೆಯನ್ನು ಬರೆದ 15ರ ಬಾಲಕ

Twitter
Facebook
LinkedIn
WhatsApp
Longest hair - 15-year-old boy who wrote the Guinness record

Longest hair ನೋಯ್ಡಾ: ಅತೀ ಉದ್ದನೆಯ ಕೂದಲನ್ನು (Longest hair) ಬಿಡುವ ಮುಖೇನ ಗಿನ್ನೆಸ್ ವಿಶ್ವ ದಾಖಲೆಯನ್ನು ಬರೆದ 15ರ ಬಾಲಕನಿಗೆ ಇದೀಗ ಸಾಮಾಜಿಕ ಜಾಲತಾಣ ಸೇರಿದಂತೆ ಅನೇಕರಿಂದ ವ್ಯಾಪಕ ಮೆಚ್ಚುಗೆ ಹರಿದುಬಂದಿದೆ. 

ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ನಿವಾಸಿ 15 ವರ್ಷದ ಸಿದಕ್‌ದೀಪ್ ಸಿಂಗ್ ಚಾಹಲ್, ಅತಿ ಉದ್ದವಾದ ಕೂದಲನ್ನು ಹೊಂದುವ ಮುಖೇನ ಈಗ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾನೆ. ದಾಖಲೆ ಬರೆಯುವ ನಿಟ್ಟಿನಲ್ಲಿ ಕೂದಲನ್ನು ಬಿಡದ ಬಾಲಕ, ತನ್ನ ಧಾರ್ಮಿಕ ನಂಬಿಕೆಗಳಿಂದಾಗಿ ಬೆಳೆಸಿದ್ದೇನೆ ಎಂದು ಹೇಳಿದ್ದಾನೆ.

ಬರೋಬ್ಬರಿ 146 ಸೆ.ಮೀ.ಗಳಷ್ಟು ಅಂದರೆ 4 ಅಡಿ ಮತ್ತು 9.5 ಇಂಚುಗಳ ಉದ್ದ ಕೂದಲನ್ನು ಬೆಳೆಸಿದ್ದಾರೆ. ಈ ಕುರಿತು ಮಾತನಾಡಿರುವ ಚಹಾಲ್​,
“ಕೂದಲು ಒಣಗಿಸುವಾಗ ಗೆಳೆಯರು ನನ್ನನ್ನು ಹುಡುಗಿ ಎಂದು ಚುಡಾಯಿಸುತ್ತಿದ್ದರು. ಆದ್ರೆ, ಅದನ್ನು ಎಂದಿಗೂ ನಾನು ನೆಗೆಟಿವ್​ ಆಗಿ ತೆಗೆದುಕೊಂಡಿಲ್ಲ. ಬದಲಿಗೆ ಅದನ್ನೇ ಪ್ರೇರಣೆಯಾಗಿ ತೆಗೆದುಕೊಂಡೆ. ಇಂದು ನನ್ನ ಹಲವಾರು ಸ್ನೇಹಿತರು ಇದಕ್ಕೆ ವಿಶೇಷವಾಗಿ ಅಭಿನಂದಿಸುತ್ತಾರೆ” ಎಂದು ಹೇಳಿದರು.

“ನಾನು ಸಿಖ್ ಧರ್ಮವನ್ನು ಅನುಸರಿಸುತ್ತೇನೆ. ನಮ್ಮ ಕೂದಲನ್ನು ಕತ್ತರಿಸುವುದನ್ನು ನಾವು ನಿಷೇಧಿಸಿದ್ದೇವೆ. ಕೂದಲನ್ನು ಈ ಉದ್ದಕ್ಕೆ ಪಡೆಯಲು ನಾನು ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳಬೇಕಾಗಿತ್ತು. ಇದಕ್ಕೆ ನನ್ನ ಕುಟುಂಬ ನೀಡಿದ ಸಂಪೂರ್ಣ ಬೆಂಬಲವೇ ಕಾರಣ” ಎಂದು ಹೇಳಿದ್ದಾರೆ.

 

ಸೂಸೈಡ್ ಪ್ರ್ಯಾಂಕ್ ಮಾಡಲು ಹೋಗಿ ಸಾವನ್ನಪ್ಪಿದ 13ರ ಬಾಲಕ

ಲಕ್ನೋ: ಸೂಸೈಡ್ ಪ್ರ್ಯಾಂಕ್ (Suicide Prank) ಮಾಡಲು ಹೋಗಿ ಬಾಲಕನೊಬ್ಬ (Boy) ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ (Uttar Pradesh) ಜಲೌನ್‌ನಲ್ಲಿ (Jalaun) ನಡೆದಿದೆ.

ಒರೈ ಪ್ರದೇಶದ ಕಾನ್ಶಿರಾಮ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಜಯೇಶ್ (13) ಸಹೋದರಿಯರೊಂದಿಗೆ ಆತ್ಮಹತ್ಯೆಯ ಆಟವಾಡುತ್ತಿದ್ದ ಸಂದರ್ಭ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿದು ಸಾವನ್ನಪ್ಪಿದ್ದಾನೆ.

ಕಿರಿಯ ಸಹೋದರಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಜಯೇಶ್ ಆತ್ಮಹತ್ಯೆ ಮಾಡಿಕೊಳ್ಳುವ ಆಟವಾಡುತ್ತಿದ್ದ ಸಂದರ್ಭ, ಆಕಸ್ಮಿಕವಾಗಿ ಕುಣಿಕೆ ಬಿಗಿಯಾಗಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಹೊರಠಾಣೆ ಉಸ್ತುವಾರಿ ಮೊಹಮ್ಮದ್ ಆರಿಫ್ ತಿಳಿಸಿದ್ದಾರೆ.

ಆಟವಾಡುವ ಸಂದರ್ಭ ಜಯೇಶ್‌ನ ಕಣ್ಣಿಗೆ ಬಟ್ಟೆ ಕಟ್ಟಿದ್ದು, ಬಳಿಕ ಕುತ್ತಿಗೆಗೆ ಹಗ್ಗವನ್ನು ಹಾಕಿಕೊಂಡಿದ್ದಾನೆ. ನಂತರ ಈ ಹಗ್ಗವನ್ನು ಒಂದು ಕಿಟಕಿಗೆ ಕಟ್ಟಿದ್ದಾನೆ. ಸಣ್ಣ ಟೇಬಲ್ ಮೇಲೆ ಕುಳಿತಿದ್ದ ಬಾಲಕ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಟೇಬಲ್ ತಳ್ಳಿದ್ದರಿಂದ ಕೆಳಗೆ ಬಿದ್ದಿದ್ದಾನೆ. ಇದರ ಪರಿಣಾಮ ಜಯೇಶ್‌ನ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಸಾವನ್ನಪ್ಪಿದ್ದಾನೆ. 

ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರ ಪ್ರಕಾರ ಮಕ್ಕಳ ತಾಯಿ ಸಂಗೀತಾ ಅವರು ತಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದು, ಕಣ್ಣು ಕಾಣಿಸುತ್ತಿದ್ದರೆ ಮಗ ಸಾಯುತ್ತಿರಲಿಲ್ಲ ಎಂದು ಹೇಳಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist