ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾರಿ-ಬೈಕ್ ಡಿಕ್ಕಿ, ವಿದ್ಯಾರ್ಥಿ ಸೇರಿ ಇಬ್ಬರು ಸಾವು

Twitter
Facebook
LinkedIn
WhatsApp
ಲಾರಿ-ಬೈಕ್ accident 5169db6aa3

ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರಿನ ಮುಖ್ಯರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಶನಿವಾರ ವಿದ್ಯಾರ್ಥಿ ಮತ್ತು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರನ್ನು ಆಳಂದ ಪಟ್ಟಣದ ಅಶೋಕ ಇಂಗಳೆ (48) ಮತ್ತು ವಿದ್ಯಾರ್ಥಿ ಸಲಾವುದ್ದೀನ್ ಅಹ್ಮದ್ (15) ಎಂದು ಗುರುತಿಸಲಾಗಿದೆ.

ಪಟ್ಟಣದ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಪರೀಕ್ಷೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮನೆ ಸಮೀಪದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಶೋಕ ಎಂಬುವವರು ವಿದ್ಯಾರ್ಥಿಯನ್ನು ಬೈಕ್ ಮೇಲೆ ಕರೆದೊಯ್ಯುತ್ತಿದ್ದಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಅಶೋಕ ಸ್ಥಳದಲ್ಲೇ ಮೃತಪಟ್ಟರೆ, ವಿದ್ಯಾರ್ಥಿಯು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾನೆ.

ನಾಲೆಗೆ ಬಿದ್ದ ಪ್ರವಾಸಿ ಬಸ್; 8 ಜನರ ಸಾವು, 25 ಮಂದಿಗೆ ಗಾಯ!

ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ 4 ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಮೃತರು ತೆಂಕಶಿ ಜಿಲ್ಲೆಯ ಕಡಯಂ ನಿವಾಸಿಗಳು. ಅವರು ಮನೆಗೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ನಂತರ ಬಸ್ ನಾಲೆಗೆ ಬಿದ್ದಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಕೊಯಮತ್ತೂರ್‌ಗೆ ಕಳುಹಿಸಲಾಗಿದೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಅಪಘಾತದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಧನಸಹಾಯವನ್ನು ಘೋಷಿಸಿದರು.

ಸಣ್ಣಪುಟ್ಟ ಗಾಯಗಳಾಗಿರುವ ಪ್ರತಿಯೊಬ್ಬರಿಗೂ 50 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲೆ ನಿಗಾ ವಹಿಸುವಂತೆ ಪ್ರವಾಸೋದ್ಯಮ ಸಚಿವ ರಾಮಚಂದ್ರನ್ ಅವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ