ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ

Twitter
Facebook
LinkedIn
WhatsApp
ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ

ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ (LPG Price Cut) 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ (Cabinet) ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.

ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ  ಸಬ್ಸಿಡಿ (Subsidy) ಹಣ ಸಿಗಲಿದೆ.

ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.

ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್‌ ದರವನ್ನು ಏರಿಸಿದ್ದವು. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

ಅಧಿಕೃತ ಮ್ಯಾಪ್‌ನಲ್ಲಿ ಅರುಣಾಚಲ ಪ್ರದೇಶ ಸೇರಿಸಿಕೊಂಡ ಚೀನಾ – ದಕ್ಷಿಣ ಟಿಬೆಟ್ ಎಂದು ನಾಮಕರಣ

ನವದೆಹಲಿ: ಗಡಿಯಲ್ಲಿ ಆಗಾಗ ಕಿರಿಕ್ ಮಾಡುತ್ತಿರುವ ಚೀನಾ (China) ಈಗ ಮತ್ತೊಮ್ಮೆ ತನ್ನ ಕಿರಿಕ್ ಬುದ್ಧಿಯನ್ನು ಪ್ರದರ್ಶಿಸಿದೆ. ಅರುಣಾಚಲ ಪ್ರದೇಶ (Arunachal Pradesh), ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರದಂತಹ ವಿವಾದಿತ ಪ್ರದೇಶಗಳನ್ನು ಒಳಗೊಂಡಿರುವ ‘ಸ್ಟ್ಯಾಂಡರ್ಡ್ ಮ್ಯಾಪ್’ನ 2023ರ ಆವೃತ್ತಿಯನ್ನು ಚೀನಾ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಅರುಣಾಚಲ ಪ್ರದೇಶದ ಮೇಲೆ ತನ್ನ ಪ್ರಾದೇಶಿಕ ಹಕ್ಕುಗಳನ್ನು ಸ್ಥಾಪಿಸುವ ಪ್ರಯತ್ನ ಮಾಡಲಾಗಿದೆ.

ಚೀನಾ ಸ್ಟ್ಯಾಂಡರ್ಡ್ ಮ್ಯಾಪ್‌ನ (Standard Map) 2023ರ ಆವೃತ್ತಿಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೈಸರ್ಗಿಕ ಸಂಪನ್ಮೂಲಗಳ ಸಚಿವಾಲಯವು ಸ್ಟ್ಯಾಂಡರ್ಡ್ ಮ್ಯಾಪ್ ಅನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಟ್ವಿಟ್ಟರ್‌ನಲ್ಲಿ ತಿಳಿಸಿದೆ. 

ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿರುವ ನಕ್ಷೆಯಲ್ಲಿ 1962ರ ಯುದ್ಧದಲ್ಲಿ ಅಕ್ಸಾಯ್ ಚಿನ್ ಆಕ್ರಮಿಸಿಕೊಂಡಿದ್ದು, ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಂಡಿದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಅವಿಭಾಜ್ಯ ಅಂಗವಾಗಿ ಉಳಿಯುತ್ತದೆ ಎಂದು ಭಾರತ ಸರ್ಕಾರ ಒತ್ತಿ ಹೇಳಿತ್ತಿರುವಾಗಲೂ ಚೀನಾ ಈ ಪ್ರಯತ್ನಕ್ಕೆ ಕೈ ಹಾಕಿದೆ.

ನಕ್ಷೆಯು ತೈವಾನ್ ಅನ್ನು ಚೀನಾವು ತನ್ನ ಮುಖ್ಯ ಭೂಭಾಗದ ಭಾಗವೆಂದು ಹೇಳಿಕೊಂಡಿದೆ ಮತ್ತು ಮುಖ್ಯ ಭೂಭಾಗದೊಂದಿಗೆ ವಿಲೀನಗೊಳ್ಳುವುದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ಅವರ ಗುರಿಯಾಗಿದೆ. ಆದರೆ ವಿಯೆಟ್ನಾಂ, ಫಿಲಿಪೈನ್ಸ್, ಮಲೇಷ್ಯಾ, ಬ್ರೂನೈ ಮತ್ತು ತೈವಾನ್ ದಕ್ಷಿಣ ಚೀನಾ ಸಮುದ್ರದಲ್ಲಿ ಪ್ರತಿವಾದ ಹಕ್ಕುಗಳನ್ನು ಹೊಂದಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ