ಎಲ್ಪಿಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ..!
ನವದೆಹಲಿ: ಕ್ರಿಸ್ಮಸ್ ಮತ್ತು ಹೊಸ ವರ್ಷಕ್ಕೆ ಮುನ್ನವೇ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್‌ಪಿಜಿ ಸಿಲಿಂಡರ್ (Cylinder) ಬೆಲೆ ಭಾರೀ ಇಳಿಕೆಯಾಗಿದೆ.
ತೈಲ ಕಂಪನಿಗಳು (Oil Marketing Companies) ವಾಣಿಜ್ಯ ಬಳಕೆಯ (Commercial LPG) 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‌ಗೆ 1,757.50 ರೂ. ದರವಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್ ಬೆಲೆ ಸಾಧಾರಣವಾಗಿ ಪರಿಷ್ಕರಣೆಗೊಳ್ಳುತ್ತವೆ.
ಪ್ರಸ್ತುತ ದಿನ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ 905.50 ರೂ. ಇದೆ. ಉಜ್ವಲ ಯೋಜನೆ ಹೊಂದಿದ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 300 ರೂ. ಸಬ್ಸಿಡಿ ಸಿಗುತ್ತಿದೆ. ಉಜ್ವಲ ಯೋಜನೆ ಅಡಿ ವರ್ಷಕ್ಕೆ ಒಟ್ಟು 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಹಣ ನೀಡಲಾಗುತ್ತದೆ.
ಇಂದಿನಿಂದ ಮಾರುಕಟ್ಟೆಯಲ್ಲಿ KMF ಎಮ್ಮೆ ಹಾಲು ಲಭ್ಯ – 1 ಲೀಟರ್ ಬೆಲೆ ಎಷ್ಟು ಗೊತ್ತಾ?
ಬೆಂಗಳೂರು: ರಾಜ್ಯದಲ್ಲಿ ಕೆಎಂಎಫ್ (KMF) ಎಮ್ಮೆ ಹಾಲು (Buffalo Milk) ಶುಕ್ರವಾರದಿಂದ (ಇಂದು) ಮಾರುಕಟ್ಟೆಗೆ ಲಭ್ಯವಾಗುತ್ತಿದ್ದು, ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ.
ಪ್ರತಿ ಲೀಟರ್ ಹಾಲಿಗೆ (Milk) 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಪ್ರತಿ ಲೀಟರ್‌ಗೆ 39.50 ರೂಪಾಯಿಗೆ (5 ರೂ. ಪ್ರೋತ್ಸಾಹಧನವನ್ನೊಳಗೊಂಡು) ಖರೀದಿ ಮಾಡಲಾಗುತ್ತಿದೆ.
ಕೆಎಂಎಫ್ ವತಿಯಿಂದ ಎಮ್ಮೆ ಹಾಲು ಪೂರೈಕೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ನಂದಿನಿ ಎಮ್ಮೆ ಹಾಲನ್ನು (Nandini Buffalo Milk) ಮಾರುಕಟ್ಟೆಗೆ ಬಿಡಲಾಗಿತ್ತು. ಆದ್ರೆ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು.
ಅಂದು ಪ್ರತಿದಿನ ಸುಮಾರು 5,000 ಲೀಟರ್ ಹಾಲನ್ನು ಕೆಎಂಎಫ್ ಮಾರಾಟ ಮಾಡುತ್ತಿತ್ತು. ಸದ್ಯ ಬೆಂಗಳೂರು ಸೇರಿದಂತೆ ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ ಮಾರುಕಟ್ಟೆಗಳಲ್ಲಿಯೂ ಎಮ್ಮೆ ಹಾಲು ಮಾರಾಟಕ್ಕೆ ಕೆಎಂಎಫ್ ನಿರ್ಧಾರ ಮಾಡಿದೆ.