ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

LPG Hike : ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತಷ್ಟು ಏರಿಕೆ; ಇಲ್ಲಿದೆ ಪರಿಷ್ಕೃತ ದರ.!

Twitter
Facebook
LinkedIn
WhatsApp
LPG Hike : ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತಷ್ಟು ಏರಿಕೆ; ಇಲ್ಲಿದೆ ಪರಿಷ್ಕೃತ ದರ.!

ಎಲ್​ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ಬೆಲೆ ಇಂದಿನಿಂದ (ಮಾರ್ಚ್​ 1) ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್​ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿವೆ. ಇದರೊಂದಿಗೆ, ಸತತ ಎರಡನೇ ತಿಂಗಳು ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದಂತಾಗಿದೆ. ಈ ಬೆಲೆ ಏರಿಕೆಯೊಂದಿಗೆ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಚಿಲ್ಲರೆ ಬೆಲೆ 1,795 ರೂ. ಆಗಿದೆ. ಮುಂಬೈನಲ್ಲಿ ಇಂದಿನಿಂದ 19 ಕೆಜಿ ಸಿಲಿಂಡರ್ 1,749 ರೂ.ಗೆ ಮಾರಾಟವಾಗಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಕ್ರಮವಾಗಿ 1,960 ರೂ, ಮತ್ತು 1,911 ರೂ.ಗೆ ಏರಿಕೆಯಾಗಿದೆ. ಫೆಬ್ರವರಿ 1 ರಂದು 19 ಕೆಜಿ ಗ್ಯಾಸ್ ಸಿಲಿಂಡರ್ ದರ 14 ರೂ. ಹೆಚ್ಚಾಗಿತ್ತು

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 23.50 ರೂ. ಹೆಚ್ಚಾಗಿ 1,875 ರೂ. ಆಗಿದೆ. ಕಳೆದ ಎರಡು ತಿಂಗಳ ದರ ಪರಿಷ್ಕರಣೆ ಬಗ್ಗೆ ಗಮನಿಸುವುದಾದರೆ, ಕೋಲ್ಕತ್ತಾದಲ್ಲಿ ಗರಿಷ್ಠ ಹೆಚ್ಚಳ ಕಂಡುಬಂದಿದೆ. ಕೋಲ್ಕತ್ತಾದಲ್ಲಿ ಎರಡು ತಿಂಗಳ ಅವಧಿಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 42 ರೂಪಾಯಿ ಏರಿಕೆಯಾಗಿದೆ. ಆ ನಂತರ ಮುಂಬೈನಲ್ಲಿ 40.5 ರೂ. ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಈ ಏರಿಕೆ 39.5 ರೂ. ಆಗಿದೆ. ದಕ್ಷಿಣ ಭಾರತದ ಅತಿದೊಡ್ಡ ಮಹಾನಗರವಾದ ಚೆನ್ನೈಯಲ್ಲಿ ಎರಡು ತಿಂಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕನಿಷ್ಠ 36 ರೂ. ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಯಥಾಸ್ಥಿತಿ

ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಪರಿಷ್ಕರಣೆಯನ್ನು ಕಳೆದ 6 ತಿಂಗಳುಗಳಿಂದ ಸ್ಥಗಿತಗೊಳಿಸಲಾಗಿದೆ. ಆಗಸ್ಟ್ 30 ರಿಂದ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆ ಸಮಯದಲ್ಲಿ ಕೇಂದ್ರ ಸರ್ಕಾರವು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 200 ರೂ. ಇಳಿಕೆ ಮಾಡಿತ್ತು. ಆ ನಂತರ ದೆಹಲಿಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 903 ರೂ.ಗೆ ಮತ್ತು ಕೋಲ್ಕತ್ತಾದಲ್ಲಿ 929 ರೂ.ಗೆ ಇಳಿದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ