ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

LPG Price: ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ..!

Twitter
Facebook
LinkedIn
WhatsApp
LPG Pric: ವಾಣಿಜ್ಯ ಬಳಕೆಯ ಸಿಲಿಂಡರ್​​ ಬೆಲೆ ಇಳಿಕೆ..!

ನವದೆಹಲಿ: ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ (LPG) ದರವನ್ನು ಕಡಿಮೆ ಮಾಡಲಾಗಿದ್ದು, ಇದರಿಂದ ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ (19kg Commercial Cylinder Price)​​ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ (ಫ್ರೀ ಟ್ರೇಡ್​ ಎಲ್​ಪಿಜಿ)​ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಅನ್ವಯವಾಗಲಿದೆ.

ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್​ 1764.50 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 1830 ರೂ. ಇಳಿಕೆಯಾಗಿದೆ.

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ತಿಂಗಳು ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆಯನ್ನು ನೀಡಿದ್ದರು.

ಮಾರ್ಚ್​​ನ ಮೊದಲ ದಿನ ಬೆಲೆ ಏರಿಕೆ

ಎಲ್​ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ಬೆಲೆ ಮಾರ್ಚ್​ 1 ರಂದು ಹೆಚ್ಚಳವಾಗಿತ್ತು. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್​ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ