ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

LPG Price: ಮಹಿಳೆಯರ ದಿನಾಚರಣೆಯ ದಿನದಂದು ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ..!

Twitter
Facebook
LinkedIn
WhatsApp
LPG Price: ಮಹಿಳೆಯರ ದಿನಾಚರಣೆಯ ದಿನದಂದು ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ..!

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ದಿನವೇ ಪ್ರಧಾನಿ ಮೋದಿ(Narendra Modi) ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ.  ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.

‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.

ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ಮೋದಿ ಹೇಳಿದ್ದಾರೆ.

ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆಯ ಮೇಲಿನ 300 ರೂಪಾಯಿ ರಿಯಾಯಿತಿಯನ್ನು ಮುಂದಿನ ಒಂದು ವರ್ಷಕ್ಕೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧಾರ ಕೈಗೊಂಡಿತ್ತು. ಅದರಾಚೆಗೆ, ಎಲ್ಲಾ ಸಾಮಾನ್ಯ ಸಿಲಿಂಡರ್ ಗ್ರಾಹಕರಿಗೆ ಪ್ರತಿ ಸಿಲಿಂಡರ್‌ಗೆ 100 ರೂ. ದರ ಇಳಿಕೆ ಅನ್ವಯವಾಗಲಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಸುಮಾರು 32.5 ಕೋಟಿ ಎಲ್‌ಪಿಜಿ ಸಂಪರ್ಕಗಳಿವೆ. ಇದರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ಸುಮಾರು 10.25 ಕೋಟಿ ಸಿಲಿಂಡರ್‌ಗಳನ್ನು ವಿತರಣೆ ಮಾಡಲಾಗಿದೆ.

ಮಾರ್ಚ್​ 1ರಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 25 ರೂ. ಹೆಚ್ಚಳ ಮಾಡಿದ್ದವು. ಆದರೆ, ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಕಳೆದ 6 ತಿಂಗಳುಗಳಿಂದ ಪರಿಷ್ಕರಣೆ ಮಾಡಿರಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ