ಮಧು, ಮಂಕಾಲ ವೈದ್ಯ ಕರಾವಳಿಗೆ ಭೇಟಿ- ಹರೀಶ್ ಕುಮಾರ್, ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿ?

ಮಂಗಳೂರು: ಲೋಕಸಭಾ ಚುನಾವಣೆ 2024ರ ಮಂಗಳೂರು ಚುನಾವಣಾ ವೀಕ್ಷಕರಾಗಿ ಮಧು ಬಂಗಾರಪ್ಪ ಹಾಗೂ ಉಡುಪಿ ಚಿಕ್ಕಮಗಳೂರು ಚುನಾವಣಾ ವೀಕ್ಷಕರಾಗಿ ಮಂಕಾಲ ವೈದ್ಯ ಈ ವಾರ ಈ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ನಡುವೆ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಎಂ ಎಲ್ ಸಿ ಹರೀಶ್ ಕುಮಾರ್ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹರೀಶ್ ಕುಮಾರ್ ಎಲ್ಲಾ ನಾಯಕರೊಂದಿಗೆ ಸರಿ ಸಮಾನರಾಗಿ ಕೆಲಸ ನಿರ್ವಹಿಸಿದ್ದು ಹಾಗೂ ಹಿರಿಯ ನಾಯಕರುಗಳನ್ನು ಬ್ಯಾಲೆನ್ಸ್ ಆಗಿ ನಿರ್ವಹಿಸಿಕೊಂಡು ಹೋಗಿದ್ದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ ಎನ್ನಲಾಗಿದೆ. ಅಲ್ಲದೆ ವಿಧಾನ ಪರಿಷತ್ತಿನಲ್ಲಿ ರವಿನ್ಯೂ ಹಾಗೂ ಇತರ ವಿಷಯಗಳ ಕುರಿತಾಗಿ ಅತ್ಯಧಿಕ ಪ್ರಶ್ನೆಗಳನ್ನು ಎತ್ತಿರುವುದು ಅವರ ಸಾಮರ್ಥ್ಯವನ್ನು ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸಿದೆ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಹಿರಿಯ ನಾಯಕರುಗಳ ನಡುವಿನ ಸ್ಪರ್ಧೆಯ ನಡುವೆ ಎಲ್ಲರನ್ನೂ ಸರಿದೂಗಿಸಿ ಕೊಂಡು ಹೋಗಿರುವುದು ಹರೀಶ್ ಕುಮಾರ್ ಅವರ ಸಾಮರ್ಥ್ಯವನ್ನು ಹೈಕಮಾಂಡ್ ಗಮನಿಸಿದೆ ಎಂದು ತಿಳಿದುಬಂದಿದೆ.
ಇನ್ನು ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಪ್ರಬಲ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಹಾಲಿ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಯವರನ್ನು ಮುಂದುವರಿಸಿರುವುದು, ಮತ್ತೆ ಅವರ ಮೇಲೆ ಇಟ್ಟ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ರಾಜಕೀಯ ವಲಯಗಳಲ್ಲಿ ಅಭಿಪ್ರಾಯ ಪಡಲಾಗಿದೆ. ಜಯಪ್ರಕಾಶ್ ಹೆಗ್ಡೆ ಯವರಿಗೆ ಹೈಕಮಾಂಡ್ ನಾಯಕರುಗಳ ಪ್ರಬಲ ಬೆಂಬಲ ಇದೆ ಎನ್ನಲಾಗುತ್ತಿದೆ. ಈ ನಡುವೆ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾದರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ ಎನ್ನಲಾಗುತ್ತಿದೆ.
ಈ ಎಲ್ಲ ಬೆಳವಣಿಗೆ ನಡುವೆ ಈ ವಾರ ಸಚಿವರುಗಳಾದ ಮಧು ಬಂಗಾರಪ್ಪ ಹಾಗೂ ಮಂಕಾಲ ವೈದ್ಯ ಮಂಗಳೂರು ಹಾಗೂ ಉಡುಪಿ ಚಿಕ್ಕಮಂಗಳೂರು ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರುಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಯಾರಾಗಬಹುದು ಎಂಬ ಕುತೂಹಲ ಎಲ್ಲಡೆ ನೆಲೆಯೂರಿದೆ.