ಮಡಿಕೇರಿ : ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಡಿಕೇರಿ : ಗೃಹಿಣಿಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲೆಜಿ ಗ್ರಾಮದ ನಿವಾಸಿ ಮುಂಡಂಡ ಪ್ರಭು ಪೆಮ್ಮಯ್ಯ ಅವರ ಪತ್ನಿ ಡೀನಾ ಪೆಮ್ಮಯ್ಯ (27) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ. ತನ್ನ 9 ವರ್ಷದ ಹೆಣ್ಣು ಮಗುವನ್ನು ತನ್ನ ತವರು ಮನೆಯಲ್ಲಿ ಬಿಟ್ಟು ನೆಲಜಿ ಗ್ರಾಮದಲ್ಲಿರುವ ಗಂಡನ ಮನೆಯಲ್ಲಿ ಯಾರು ಇಲ್ಲದ ಸಮಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಪೋಲೀಸರ ಪರಿಶೀಲನೆ ವೇಳೆ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಕ್ರೈಂ ಪಿಎಸ್ಐ ಶ್ರೀಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಡೀನಾ ಪೆಮ್ಮಯ್ಯ ಅವರ ತಂದೆ ಪೂಣಚ್ಚ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಳ್ತಂಗಡಿ – ಸ್ಪೋಟಗೊಂಡ ಪಟಾಕಿ ತಯಾರಿಕಾ ಘಟಕ – ಛಿದ್ರಗೊಂಡ ಮೂವರು ಸ್ಥಳದಲ್ಲೇ ಸಾವು
ಬೆಳ್ತಂಗಡಿ : ಪಟಾಕಿ ತಯಾರಿಕಾ ಘಟಕ ಸ್ಪೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ನಡೆದಿದೆ. ಮೃತರನ್ನು ಕೇರಳದ ಸ್ವಾಮಿ(55) ,ಕೇರಳದ ವರ್ಗಿಸ್ (68),ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಉಳಿದಂತೆ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಕೇರಳ ಇಷ್ಟು ಮಂದಿ ಕೆಲಸ ನಿರ್ವಹಿಸುತ್ತಿದ್ದರು.
ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ,ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸ್ಥಳದಲ್ಲಿ ಶೆಡ್ ಸಂಪೂರ್ಣ ಧ್ವಂಸವಾಗಿದ್ದು ಇದರ ಸದ್ದು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ,ಡಿವೈಎಸ್ ಪಿ ವಿಜಯ ಪ್ರಸಾದ್ ಸಹಿತ ವೇಣೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಸ್ಥಳಕ್ಕೆ ಎಸ್.ಪಿ. ರಿಷ್ಯಂತ್ ಭೇಟಿ ನೀಡಿದ್ದಾರೆ.