ಮಲ್ಪೆ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ; ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರನ್ನು ಚೂರಿಯಿಂದ ಇರಿದು ಕೊಲೆ!
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.
ಮುಸ್ಲಿಂ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆಯಾದವರು. ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿದೆ.
ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆದ ಬಳಿಕ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫಾನ್, ಐನಾಜ್ ಗೆ ಇರಿದ ದುಷ್ಕರ್ಮಿ, ಬಳಿಕ ಅಲ್ಲೇ ಆಟವಾಡುತ್ತಿದ್ದ ಆಸೀಮ್ ಸದ್ದು ಕೇಳಿ ಒಳ ಬರುತ್ತಿದ್ದಂತೆ ಆತನನ್ನು ಕೂಡ ದುಷ್ಕರ್ಮಿ ಇರಿದುಕೊಂದಿದ್ದಾನೆ
ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ದುಷ್ಕರ್ಮಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇನ್ನು ಜೀವಾಂತ್ಯಗೊಳಿಸಿದ ಮಹಿಳೆಯ ಅತ್ತೆಗೂ ತೀವ್ರ ತರಹದ ಗಾಯಗಳಾಗಿದ್ದು, ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.