ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

Twitter
Facebook
LinkedIn
WhatsApp
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ. ಹೌದು, ಉಡುಪಿ ಜಿಲ್ಲೆಯ ಮಲ್ಪೆ ಬೀಚಿನಲ್ಲಿ(Malpe Beach) ಈ ದುರ್ಘಟನೆ ಸಂಭವಿಸಿದೆ. ದೂರದ ಹಾಸನದ ಬೇಲೂರಿನಿಂದ ಪ್ರವಾಸಕ್ಕೆ ಬಂದ ಕುಟುಂಬವೊಂದರ ಮೂವರು ನೀರಿಗೆ ಇಳಿದಿದ್ದರು. ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ಈ ವೇಳೆ ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್​ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿ, ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು. ಆದರೆ, ಮೂರನೇ ವ್ಯಕ್ತಿ ನೀರಿನ ಅಲೆಗೆ ಸಿಲುಕಿರುವುದು ಅರಿವಿಗೆ ಬರುವುದು ತಡವಾಗಿದ್ದ ಹಿನ್ನಲೆ ಆತನನ್ನು ಮೇಲಕ್ಕೆತ್ತಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಲೇ ಸಾಕಷ್ಟು ನೀರು ಕುಡಿದಿದ್ದ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದಾನೆ. ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ.

ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್​ಗೆ ಬಂದಿತ್ತು. ಈ ಪೈಕಿ 42 ವರ್ಷ ಪ್ರಾಯದ ಅನಂತ ಗೌಡ, 27 ವರ್ಷ ಪ್ರಾಯದ ಸಂತೋಷ್ ಹಾಗೂ 26 ವರ್ಷ ದ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹವಾಮಾನ ವೈಪರಿತ್ಯ ಸಂಭವಿಸಿದಾಗ, ಕಡಲಿನ ಅಲೆಗಳು ಅಬ್ಬರಿಸುವುದು ಸಾಮಾನ್ಯ. ಸ್ಥಳೀಯವಾಗಿ ಇದನ್ನು ಮಾರಿಅಲೆ ಎಂದು ಕರೆಯುತ್ತಾರೆ. ಅಪಾಯದ ಅರಿವಿಲ್ಲದೆ ಪ್ರವಾಸಿಗರು, ನೀರಿಗಿಳಿದಾಗ ಇಂತಹ ದುರ್ಘಟನೆಗಳು ಪದೇಪದೇ ಸಂಭವಿಸುತ್ತಿದೆ.

ಈ ಕುರಿತು ಎಷ್ಟೇ ಎಚ್ಚರಿಕೆಯ ಸೂಚನೆ ನೀಡಿದರೂ ಪ್ರವಾಸಿಗರು ಎಚ್ಚೆತ್ತುಕೊಳ್ಳದ ಕಾರಣ, ಸಾವು ನೋವು ಸಂಭವಿಸುತ್ತಿದೆ. ಸಾಮಾಜಿಕ ಕಾರ್ಯಕರ್ತ ಈಶ್ವರ ಮಲ್ಪೆ ಇಂದಿನ ದುರ್ಘಟನೆ ಸಂಭವಿಸಿದ ವೇಳೆ ಸಕಾಲದಲ್ಲಿ ಹಾಜರಿದ್ದು, ಆಂಬುಲೆನ್ಸ್ ಮೂಲಕ ನೀರುಪಾಲಾದ ಯುವಕರನ್ನು ಮಣಿಪಾಲಕ್ಕೆ ಕೊಂಡೊಯ್ದ ಪರಿಣಾಮ ಎರಡು ಜೀವಗಳು ಉಳಿದಿವೆ. ದುರಾದೃಷ್ಟವಶಾತ್ ಓರ್ವನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಎರಡು ದಿನಗಳ ಕಾಲ ಮಳೆ ಹಾಗೂ ಅಲೆಗಳ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಮಕ್ಕಳ ರಜೆ ಹಾಗೂ ವೀಕೆಂಡ್ ಮಸ್ತಿಯ ಕಾರಣಕ್ಕೆ ಕಡಲ ತೀರಗಳಿಗೆ ಬರುವ ರಾಜ್ಯದ ಇತರ ಮೂಲೆಗಳ ಪ್ರವಾಸಿಗರು ಎಚ್ಚರಿಕೆ ವಹಿಸುವುದು ಅಗತ್ಯ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ