ಬೆಡ್ರೂಮ್ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯೊಂದರಲ್ಲಿ ವ್ಯಕ್ತಿಯೋರ್ವ ಬೆಡ್ರೂಮ್ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಹತ್ಯೆಗೆ ಹಳೆ ದ್ವೇಷವೇನಾದರೂ ಇತ್ತಾ?, ಎಂಬ ಕುರಿತು ವಿಚಾರಣೆ ಶುರುವಾಗಿದೆ.
ಕ್ತಿಯೋರ್ವ ಬೆಡ್ರೂಮ್ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದ ಇಂದಿರಾನಗರದ ಮನೆಯಲ್ಲಿ ನಡೆದಿದೆ. ಆಂಜಿನಪ್ಪ(35) ಮೃತ ರ್ದುದೈವಿ. ಗೃಹಿಣಿ ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆಡ್ರೂಮ್ಗೆ ನುಗ್ಗಿದ್ದಾನೆ. ಕೂಡಲೇ ಎಚ್ಚೆತ್ತ ಮಹಿಳೆ ಮೈದುನನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಮೈದುನ ರಾಘವೇಂದ್ರ ಎಂಬಾತ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಆಂಜಿನಪ್ಪನನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.