ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನನೊಂದು ಅತಿಥಿ ಉಪನ್ಯಾಸಕ ಆತ್ಮಹತ್ಯೆ,

Twitter
Facebook
LinkedIn
WhatsApp
ಮನನೊಂದು ಅತಿಥಿ ಉಪನ್ಯಾಸಕ ಆತ್ಮಹತ್ಯೆ,

ಸಿಂಧನೂರು(ಅ.13): ನಗರದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಕೌಟುಂಬಿಕವಾಗಿ ಮನನೊಂದು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ನಗರದ ವಾರ್ಡ್ ನಂ.17ರ ಗಂಗಾನಗರ ನಿವಾಸಿ ಶಿವಪುತ್ರಪ್ಪ ಗುಂಡಸಾಗರ (47) ಮೃತ ದುರ್ದೈವಿ. 

ಈತನಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರಿದ್ದಾರೆ. ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟ್‌ರ್ ದುರುಗಪ್ಪ ಡೊಳ್ಳಿನ್, ಸಬ್ ಇನ್ಸಪೆಕ್ಟ್‌ರ್ ಬಸವರಾಜ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. 

ನಂತರ ಮೃತದೇಹವನ್ನು ತಾಲೂಕಾಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶಿವಪುತ್ರಪ್ಪ ಗುಂಡಸಾಗರ ಅವರ ಪತ್ನಿ ಶಶಿಕಲಾ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಸಂಜೆ ನಗರದ ಹಿರೇಹಳ್ಳ ಪಕ್ಕದಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.

ರಾಮನಗರ: ಜೂಜಾಟ ವೇಳೆ ದಾಳಿ, ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ್ದ ವ್ಯಕ್ತಿ ಸಾವು

ಕನಕಪುರ(ಅ.13):  ಜೂಜಾಟ ವೇಳೆ ಪೊಲೀಸರು ದಾಳಿ ನಡೆಸಿದಾಗ ಸ್ಥಳದಿಂದ ತಪ್ಪಿಸಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. 

ತಾಲೂಕಿನ ತಿಗಳರ ಹೊಸಹಳ್ಳಿಯ ಮರಿಸ್ವಾಮಿ (30)ಮೃತ ವ್ಯಕ್ತಿ. ಮಂಗಳವಾರ ರಾತ್ರಿ ತಿಗಳರ ಹೊಸಹಳ್ಳಿ ಹಾಗೂ ಅಕ್ಕ-ಪಕ್ಕದ ಗ್ರಾಮಗಳಿಂದ ಕೆಲ ಯುವಕರ ಗುಂಪೊಂದು ಟಿ.ಹೊಸಹಳ್ಳಿ‌ಯಲ್ಲಿ ಜೂಜಾಟ ಆಡುತ್ತಿದ್ದ ವೇಳೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ಆಗ ಅಲ್ಲಿಂದ ತಪ್ಪಿಸಿಕೊಂಡು ಹೋಗುವ ವೇಳೆ ಇಬ್ಬರು ಸೆರೆ ಸಿಕ್ಕಿದ್ದು ಉಳಿದವರು ಪರಾರಿಯಾಗಿದ್ದರು. 

 

ಈ ವೇಳೆ ಮರಿಸ್ವಾಮಿ ಕಾಲು ಜಾರಿ ಅರ್ಕಾವತಿ ನದಿಗೆ ಬಿದ್ದಿದ್ದ. ಮನೆಗೆ ಬಾರದ ಮರಿಸ್ವಾಮಿ ಬಗ್ಗೆ ಆತನ ಕುಟುಂಬದವರು ಸ್ನೇಹಿತರನ್ನು ವಿಚಾರಿಸಿದಾಗ ಯಾವುದೇ ಮಾಹಿತಿ ದೊರೆತಿರಲಿಲ್ಲ. ಆದರೆ ಗುರುವಾರ ಬೆಳಗ್ಗೆ ನದಿಯಲ್ಲಿ ಶವಪತ್ತೆಯಾಗಿದ್ದು ಆತನ ಸಾವಿನ ವಿಷಯ ಬಯಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ