ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಡ್ಯ : ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಪರಿಚಯಸ್ಥ ಹುಡುಗನಿಂದಲೇ ಶಿಕ್ಷಕಿ ಕೊಲೆ

Twitter
Facebook
LinkedIn
WhatsApp
ಮಂಡ್ಯ : ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಪರಿಚಯಸ್ಥ ಹುಡುಗನಿಂದಲೇ ಶಿಕ್ಷಕಿ ಕೊಲೆ

ಮಂಡ್ಯ: ಶಿಕ್ಷಕಿಯನ್ನು (Teacher) ಕೊಲೆಗೈದು ಬೆಟ್ಟದ ತಪ್ಪಲಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪರಿಚಯಸ್ಥ ಹುಡುಗನಿಂದಲೇ ಶಿಕ್ಷಕಿ ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಮಂಡ್ಯ (Mandya) ಜಿಲ್ಲೆ ಪಾಂಡವಪುರ (Pandavapura) ತಾಲೂಕಿನ ಮೇಲುಕೋಟೆಯಲ್ಲಿ (Melukote) ಶಿಕ್ಷಕಿ ದೀಪಿಕಾ (28) ಮೃತದೇಹ ಕೊಲೆ ಮಾಡಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈಕೆಯ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಇದೀಗ ಸ್ವಗ್ರಾಮದ ಯುವಕನ ವಿರುದ್ಧ ಮೃತ ದೀಪಿಕಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ದೀಪಿಕಾ ನಾಪತ್ತೆಗೂ ಮುನ್ನ ನಿತೀಶ್ (22) ಎಂಬಾತ ಕೊನೆಯ ಕರೆ ಮಾಡಿದ್ದ. ದೀಪಿಕಾ ಮೃತದೇಹ ಸಿಗುತ್ತಿದ್ದಂತೆ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ

ನಿತೀಶ್ ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾ ಜೊತೆ ಸ್ನೇಹ ಬೆಳೆಸಿದ್ದ. ಒಂದೇ ಊರಿನವನಾದ್ದರಿಂದ ದೀಪಿಕಾ ಆತನ ಜೊತೆ ಸಲುಗೆಯಿಂದಲೇ ಮಾತನಾಡುತ್ತಿದ್ದಳು. ನಿತೀಶ್‌ನಿಂದಲೇ ದೀಪಿಕಾ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೂ ಮುನ್ನ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಮತ್ತು ನಿತೀಶ್ ಜಗಳವಾಡುತ್ತಿದ್ದ ವೀಡಿಯೋ ಸೆರೆಯಾಗಿದೆ. 13 ಸೆಕೆಂಡ್‌ಗಳ ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರವಾಸಿಗರು ಅದನ್ನು ಪೊಲೀಸರಿಗೆ ನೀಡಿದ್ದಾರೆ. ನಾಪತ್ತೆ ದೂರು ನೀಡಿದ್ರು, ಜಗಳ ವಿಡಿಯೋ ಸಿಕ್ಕಿದ್ರು ಗಂಭೀರವಾಗಿ ಪರಿಗಣಿಸದೆ ಪೊಲೀಸರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದರು. 

ಬಳಿಕ ಬೆಟ್ಟದ ತಪ್ಪಲಿನಲ್ಲೇ ದೀಪಿಕಾಳ ಡಿಯೋ ಸ್ಕೂಟರ್ ಪತ್ತೆಯಾಗಿದೆ. ಸ್ಕೂಟರ್ ಪತ್ತೆಯಾದ ಸ್ಥಳದ ಸುತ್ತಮುತ್ತ ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ ವೇಳೆ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಕುಟುಂಬಸ್ಥರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಹಶಿಲ್ದಾರ್ ಸಮ್ಮುಖದಲ್ಲಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನು ಆರೋಪಿ ಪತ್ತೆಗೆ 2 ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಶ್ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಸಹ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist