ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ; ದೇವೇಗೌಡರು, ಕುಮಾರಸ್ವಾಮಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ: ರಾಧಾ ಮೋಹನ್ ದಾಸ್ ಅಗರವಾಲ್

Twitter
Facebook
LinkedIn
WhatsApp
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ; ದೇವೇಗೌಡರು, ಕುಮಾರಸ್ವಾಮಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ: ರಾಧಾ ಮೋಹನ್ ದಾಸ್ ಅಗರವಾಲ್

ಬೆಂಗಳೂರು: ಮಂಡ್ಯ, ಹಾಸನ, ಕೋಲಾರ (Mandya, Hassan, Kolar) ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ (Radha Mohan Das Agarwal) ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ (Bengaluru Palace Grounds) ವೃಕ್ಷ ಸಭಾಂಗಣದಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಂಡ್ಯ, ಹಾಸನ, ಕೋಲಾರ ಮೂರು ಕ್ಷೇತ್ರ ಜೆಡಿಎಸ್‌ಗೆ (JDS) ಬಿಟ್ಟುಕೊಡುವ ತೀರ್ಮಾನ ಆಗಿದೆ. ಸುಮಲತಾ ಅವರ ಟಿಕೆಟ್ ತೀರ್ಮಾನ ಆಗಿಲ್ಲ ಎಂದು ಹೇಳಿದ್ದು ಆಗ ಸತ್ಯ ಆಗಿತ್ತು. ಈಗ ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ತೀರ್ಮಾನ ಆಗಿದೆ. ಸುಮಲತಾ ಅವರ ಪಾತ್ರ ಬಹಳ ದೊಡ್ಡದಿದೆ. ಅವರ ರಾಜಕೀಯ ಭವಿಷ್ಯವು ಸಹ ಬಹಳ ಉತ್ತಮ ಆಗಿರಲಿದೆ ಎಂದು ಹೇಳಿದ್ದಾರೆ.

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಗೌಡ್ರು, ಹೆಚ್‌ಡಿಕೆ:
ಚುನಾವಣೆ ಪ್ರಚಾರ ಕಾರ್ಯ ಆರಂಭ ಆದ್ಮೇಲೆ ಜೆಡಿಎಸ್ ಹಾಗೂ ಬಿಜೆಪಿ (BJP JDS Alliacne) ನಾಯಕರು ಒಟ್ಟಾಗಿ ಕೆಲಸ ಮಾಡುತ್ತೇವೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಕೋಲಾರದಲ್ಲಿ ಸಂಸದ ನಮ್ಮ ಕಾರ್ಯಕರ್ತ, ಅತ್ಯಂತ ಸಮರ್ಪಣಾ ಭಾವದ ವ್ಯಕ್ತಿ. ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಯೋಚನೆ ಮಾಡುತ್ತೇವೆ. ನಾನು ಯಾವುದೇ ಒಳಜಗದ ಬಗ್ಗೆ ಚಿಂತೆ ಮಾಡಲ್ಲ, ದೊಡ್ಡ ಪಕ್ಷ ಕೋಟ್ಯಂತರ ಕಾರ್ಯಕರ್ತರು ಇದ್ದಾರೆ. ಅಸಮಾಧಾನಿತರು ಇದ್ದೇ ಇರ್ತಾರೆ, ಇದ್ಯಾವುದನ್ನೂ ನೋಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. 

ಡಿ.ವಿ ಸದಾನಂದಗೌಡರ ಶುದ್ಧೀಕರಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಶುದ್ಧೀಕರಣ ಹಿಂದೂ ಸಂಸ್ಕೃತಿ. ನಮ್ಮನ್ನು ನಾವು ಯಾವಾಗಲೂ ಶುದ್ದೀಕರಣ ಮಾಡಿಕೊಳ್ಳುತ್ತೇವೆ. ಅವರು ಬಿಜೆಪಿಯವರು ಬಿಜೆಪಿಯಲ್ಲೇ ಇರ್ತಾರೆ. ಬಿಜೆಪಿಯಲ್ಲಿ ಸದಾಕಾಲ ಶುದ್ದೀಕರಣ ಆಗ್ತಾನೆ ಇರುತ್ತೆ. ಇದೇನು ಹೊಸದಲ್ಲ ಎಂದು ರಾಧಾ ಮೋಹನ್ ದಾಸ್ ಅಗರವಾಲ್ ಹೇಳಿದ್ದಾರೆ.

6 ಬಾರಿ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ:
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಬೆಳಗಾವಿಯಲ್ಲಿ ಯಾರಿಗಾದರೂ ಟಿಕೆಟ್ ಕೊಡಿ, ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಲು ಅಲ್ಲಿಯ ಲೀಡರ್ ಬಂದಿದ್ದರು. ಜಗದೀಶ್ ಶೆಟ್ಟರ್ ವಿರುದ್ಧವಾಗಿ ಮಾತಾಡಿದ್ದು ನನಗೆ ಗೊತ್ತಿಲ್ಲ. ನಿಮಗೆ ಮಾಹಿತಿ ಇರಬಹುದು. ಮೋದಿ ಕರ್ನಾಟಕವನ್ನು ಬಹಳ ಪ್ರೀತಿಸುತ್ತಾರೆ. ಈಗಾಗಲೇ ಎರಡು ಸಭೆ ಮಾಡಿದ್ದಾರೆ. ಮತ್ತೆ-ಮತ್ತೆ ಬರಬೇಕು ಎಂದು ವಿನಂತಿ ಮಾಡುತ್ತೇನೆ. ಕೇವಲ ಎರಡು ದಿನದ ತಯಾರಿಯಲ್ಲಿ ಬಹಳ ಅದ್ಭುತವಾಗಿ ಮೋದಿ ಕಾರ್ಯಕ್ರಮ ನಡೆದಿದೆ. ಉತ್ತರ ಪ್ರದೇಶದಲ್ಲೂ ಇಷ್ಟೊಂದು ಅದ್ಭುತವಾಗಿ ಕಾರ್ಯಕ್ರಮ ಮಾಡಲು ಸಾಧ್ಯವಾಗಿಲ್ಲ ರಾಜ್ಯಕ್ಕೆ ಎಷ್ಟು ಸಮಯ ಕೊಡ್ತಾರೆ ನೋಡಬೇಕು. 6 ಬಾರಿ ಮೋದಿ ರಾಜ್ಯಕ್ಕೆ ಬರುವ ನೀರಿಕ್ಷೆ ಇದೆ ಎಂದು ವಿವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ