ಸೋಮವಾರ, ಮೇ 20, 2024
ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಡ್ಯ : ಮಕ್ಕಳ ಬಿಸಿಯೂಟಕ್ಕೆ ಕನ್ನ ಹಾಕಿದ ಶಿಕ್ಷಕನನ್ನು ರೆಡ್‍ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

Twitter
Facebook
LinkedIn
WhatsApp
1200 675 18871244 thumbnail 16x9 vny22 7

ಮಂಡ್ಯ: ಸರ್ಕಾರ ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳನ್ನು ಕದ್ದು ಕೊಂಡೊಯ್ಯುತ್ತಿದ್ದ ಶಾಲಾ (School) ಶಿಕ್ಷಕನನ್ನು ಗ್ರಾಮಸ್ಥರು ರೆಡ್‍ಹ್ಯಾಂಡ್ ಆಗಿ ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಮಳವಳ್ಳಿಯ (Malavalli) ತಂಗಳವಾದಿಯಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಕ ಶಿವರುದ್ರ ಮಕ್ಕಳಿಗೆ ನೀಡುತ್ತಿದ್ದ ಹಾಲು ಹಾಗೂ ಬೇಳೆ ಪ್ಯಾಕೆಟ್ ಕದ್ದೊಯ್ತಿದ್ದ. ಈ ವೇಳೆ ಗ್ರಾಮಸ್ಥರು ಹೋಗಿ ಬೈಕ್ ಅಡ್ಡಗಟ್ಟಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಲಿನ ಪ್ಯಾಕ್‍ಗಳು ಹಾಗೂ ಬೇಳೆ ಪ್ಯಾಕ್‍ಗಳು ಪತ್ತೆಯಾಗಿವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಸರ್ಕಾರ ಸಂಬಳ ಹೆಚ್ಚಿಗೆ ಮಾಡಿದರೂ ನಿಮಗೆ ಯಾಕೆ ಈ ಬುದ್ದಿ ಬಂತು ಎಂದು ಛೀಮಾರಿ ಹಾಕಿದ್ದಾರೆ.

ಬಳಿಕ ಶಿಕ್ಷಕನ ಸಮೇತ ಕದ್ದ ಸಾಮಾಗ್ರಿಗಳನ್ನು ಗ್ರಾಮಸ್ಥರು ವಿಡಿಯೋ ಮಾಡಿ ಬಿಇಒಗೆ ದೂರ ನೀಡಿದ್ದಾರೆ. ಅಲ್ಲದೇ ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ