ಭಾನುವಾರ, ಮೇ 26, 2024
ಹೈದರಾಬಾದನ್ನು 8 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಶಿಪ್ ಪಟ್ಟಕ್ಕೆ ಮುತ್ತಿಕ್ಕಿದ ಕೆಕೆಆರ್..!-ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಕಾರು ಪಾರ್ಕಿಂಗ್ ಮಾಡುವ ವೇಳೆ ಕಾರಿನ ಮುಂದೆ ಓಡಿ ಬಂದ ಮಗು ; ಚಕ್ರದಡಿ ಸಿಲುಕಿ ಮೃತ್ಯು!

Twitter
Facebook
LinkedIn
WhatsApp
ಮಂಗಳೂರು : ಕಾರು ಪಾರ್ಕಿಂಗ್ ಮಾಡುವ ವೇಳೆ ಕಾರಿನ ಮುಂದೆ ಓಡಿ ಬಂದ ಮಗು ; ಚಕ್ರದಡಿ ಸಿಲುಕಿ ಮೃತ್ಯು!

ಮಂಗಳೂರು: ಕಾರೊಳಗಿದ್ದ ಚಿಕ್ಕಪ್ಪನನ್ನು ಕಂಡ ಕೂಡಲೇ ಹಿಂಬಾಲಿಸಲು ಹೋದ ಮಗುವೊಂದು ಕಾರಿನ ಚಕ್ರದಡಿ ಸಿಲುಕಿ (Accident Case) ಮೃತಪಟ್ಟಿದೆ. ಈ ದುರ್ಘಟನೆ ಮಂಗಳೂರು ಗಡಿಭಾಗದ ಕಾಸರಗೋಡಿನ ಉಪ್ಪಳದ ಸೋಂಕಾಲ್ ಬಳಿ (Accident Case) ನಡೆದಿದೆ.

ಸೋಂಕಾಲ್ ನಿವಾಸಿ ನಿಝಾರ್ ತಸ್ರೀಫಾ ಎಂಬುವವರ ಒಂದೂವರೆ ವರ್ಷದ ಪುತ್ರ ಮಸ್ತುಲ್ ಜಿಶಾನ್ ದುರ್ಮರಣ ಹೊಂದಿದ್ದಾನೆ. ಮನೆಯ ಪಾರ್ಕಿಂಗ್‌ ಜಾಗದಲ್ಲಿ ಜಿಶಾನ್‌ ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ. ಇದೇ ವೇಳೆ ಜಿಶಾನ್‌ನ ಚಿಕ್ಕಪ್ಪ ಹೊರಗಿದ್ದ ಕಾರನ್ನು ಮನೆಯೊಳಗೆ ತಂದು ಪಾರ್ಕಿಂಗ್‌ ಮಾಡಲು ಮುಂದಾಗಿದ್ದರು.

ಚಿಕ್ಕಪ್ಪ ಕಾರಲ್ಲಿ ಬರುವುದನ್ನು ಕಂಡ ಕೂಡಲೇ ಓಡೋಡಿ ಬಂದ ಜಿಶಾನ್‌ ಕಾರಿನ ಮುಂದೆ ಬಂದು ನಿಂತಿದ್ದ. ಆದರೆ ಇದ್ಯಾವುದರ ಅರಿವು ಇರದ ಅವರು ಕಾರನ್ನು ಹಿಂದೆ ತೆಗೆದು ಮುಂದೆ ಬಂದಿದ್ದಾರೆ. ಈ ವೇಳೆ ಕಾರಿನ ಮುಂಭಾಗದ ಚಕ್ರ ಮಗುವಿನ ಮೈಮೇಲೆ ಹರಿದಿದೆ. ಈ ದೃಶ್ಯವೆಲ್ಲ ಮನೆಗೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೂಡಲೇ ಮಗುವಿನ ಚಿಕ್ಕಪ್ಪ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತ ತಪ್ಪಿಸಲು ಹೋಗಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ರೂಸರ್‌; ಮೂವರು ದಾರುಣ ಸಾವು

ಧಾರವಾಡ: ಅವರೆಲ್ಲೂ ಕೂಲಿ ಕಾರ್ಮಿಕರು. ಕೆಲಸ ಮುಗಿಸಿ ಮನೆಗೆ ಮರುಳುತ್ತಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಮನೆಗೆ ಹೋಗಬೇಕಾದವರು ದಾರಿ ಮಧ್ಯೆಯೇ ಜೀವ ಬಿಟ್ಟಿದ್ದಾರೆ. ಬೈಕ್ ಹಾಗೂ ಕ್ರೂಸರ್ ವಾಹನದ ನಡುವೆ ಅಪಘಾತ (road Accident) ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಶಿವಳ್ಳಿ ಬಳಿ ಭಾನುವಾರ ರಾತ್ರಿ ಈ ಅಪಘಾತ ನಡೆದಿದೆ.

ಕ್ರೂಸರ್‌ನಲ್ಲಿದ್ದ ಬಸವರಾಜ್ ಕುರಹಟ್ಟಿ (45), ಯಲ್ಲಪ್ಪ ಗಂಟಿ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅರುಣ್ ಎಂಬಾತ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಬೈಕ್ ಸವಾರನ ಜೀವ ಉಳಿಸಲು ಹೋಗಿ ಅಪಘಾತ ನಡೆದಿದೆ ಎನ್ನಲಾಗಿದೆ. ಕ್ರೂಸರ್‌ ವಾಹನವು ಮೊದಲಿಗೆ ಬೈಕ್‌ಗೆ ಡಿಕ್ಕಿ ಹೊಡೆದಿದ್ದು ಬಳಿಕ ಮರಕ್ಕೆ ಗುದ್ದಿದೆ. ಈ ವೇಳೆ ಕ್ರೂಸರ್‌ನಲ್ಲಿದ್ದ ಕೂಲಿ ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ನವಲಗುಂದ ತಾಲೂಕಿನ ಜಾವೂರು, ಹೆಬ್ಬಾಳ ಗ್ರಾಮದ ಕೂಲಿ ಕಾರ್ಮಿಕರು ಧಾರವಾಡಕ್ಕೆ ಬಂದಿದ್ದರು. ಕೆಲಸ ಮುಗಿಸಿ ಮರಳಿ ಊರಿಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

ಸದ್ಯ ಗಾಯಾಳುಗಳನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿವಿಲ್ ಆಸ್ಪತ್ರೆಗೆ ಶಾಸಕ ಎನ್ ಎಚ್ ಕೋನರೆಡ್ಡಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ