ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ನಂತೂರಿನಲ್ಲಿ ಭೀಕರ ಅಪಘಾತ ; ಚಾಲಕ ಶಮೀತ್ ಶೆಟ್ಟಿ ಸಾವು.!

Twitter
Facebook
LinkedIn
WhatsApp
ಮಂಗಳೂರು: ನಂತೂರಿನಲ್ಲಿ ಭೀಕರ ಅಪಘಾತ ; ಚಾಲಕ ಶಮೀತ್ ಶೆಟ್ಟಿ ಸಾವು.!

ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ನಂತೂರಿನಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಕಾರಿನ ಚಾಲಕ ಸಾವನಪ್ಪಿದ್ದಾರೆ. ಮೃತರನ್ನು ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಎಂದು ಗುರುತಿಸಲಾಗಿದೆ.

ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ.

ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ನಕ್ಸಲರಿಗಾಗಿ ಮುಂದುವರಿದ ಶೋಧ

ಸುಳ್ಯ: ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದ ಮಡಿಕೇರಿ ತಾಲೂಕಿನ ಕೂಜಿಮಲೆ ಎಸ್ಟೇಟ್ ಪ್ರದೇಶಕ್ಕೆ ನಾಲ್ವರು ನಕ್ಸಲರು ಭೇಟಿ ನೀಡಿದ್ದ ಸಂಬಂಧ ನಕ್ಸಲ್ ನಿಗ್ರಹ ದಳದ ಶೋಧ ಐದನೇ ದಿನವಾದ ಶುಕ್ರವಾರವೂ ಮುಂದುವರಿದಿತ್ತು.

ಶುಕ್ರವಾರ ಕೂಜಿಮಲೆ, ಕಡಮಕಲ್ಲು, ಶಿಬಾಜೆ ಮಿತ್ತಮಜಲು, ಕುತ್ಲೂರು , ಕೇರಳ ಗಡಿ, ಸಂಪಾಜೆ ಸಮೀಪದ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗಿದೆ.ಆದರೆ ನಕ್ಸಲ್ ರ ಇರುವಿಕೆಯ ಕುರುಹ ಪತ್ತೆಯಾಗಿಲ್ಲ.

ಕೂಜಿಮಲೆ ಭಾಗದಲ್ಲಿ ಮಾ.16 ರಂದು ಅರಣ್ಯ ಇಲಾಖೆ ಸಿಬ್ಬಂದಿಯ ಸಮವಸ್ತ್ರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಮರುದಿನ ಅವರು ಅರಣ್ಯ ಇಲಾಖೆಯ ಸಿಬ್ಬಂದಿಯಲ್ಲ, ನಕ್ಕಲರು ಎಂಬುವುದು ಅರಿವಿಗೆ ಬಂದಿತ್ತು. ಮರುದಿನ ಅವರು ಅರಣ್ಯ ಇಲಾಖೆಯ ಸಿಬ್ಬಂದಿಯಲ್ಲ, ನಕ್ಸಲರು ಎಂಬುವುದು ಅರಿವಿಗೆ ಬಂದಿತ್ತು. ಅವರು ಕಬನಿದಳಂ ಗುಂಪಿನ ಮಾವೋವಾದಿಗಳು ಎಂದು ಶಂಕೆ ತನಿಖೆ ವ್ಯಕ್ತವಾಗಿದೆ.

ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ತಗುಲಿದ ಬೆಂಕಿ

ಬಂಟ್ವಾಳ: ಮಂಚಿ ಎಂಬಲ್ಲಿ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ‌ನಂದಿಸಿದ್ದಾರೆ.

ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟ ಇದ್ದು, ಬೆಂಕಿಯ ತೀವ್ರತೆಗೆ ರಬ್ಬರ್ ಕೃಷಿ ನಾಶವಾಗುವ ಸಾಧ್ಯತೆಗಳಿವೆ ಎಂದು ತೋಟದ ಮಾಲಕ ಅಗ್ನಿ ಶಾಮಕದಳದ ಕಚೇರಿಗೆ ಮಾಹಿತಿ ನೀಡಿದ್ದರು.

ಗುಡ್ಡದ ಮೇಲೆ ಕಾಣಿಸಿಕೊಂಡ ಬೆಂಕಿ ಯಾವುದೇ ಅಪಾಯವನ್ನು ಮಾಡಬಾರದು ಎಂಬ ದೃಷ್ಟಿಯಿಂದ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ