ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Mangalore: ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು, ಯುವಕ ಸಾವು

Twitter
Facebook
LinkedIn
WhatsApp
Mangalore: Awkwardness During Cosmetic Surgery; Death of a young man

Mangalore: ಮಂಗಳೂರಿನ (Mangalore) ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ(cosmetic surgery) ವೇಳೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹ್ಮದ್ ಮಾಝಿನ್(32) ಮೃತ ರ್ದುದೈವಿ. ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್, ತನ್ನ‌ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪರೆಂಟ್ ಕ್ಲಿನಿಕ್​ಗೆ ಬಂದಿದ್ದ.

ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆ, ಸಂಜೆಯಾದರೂ ಮುಗಿಯದ ಹಿನ್ನೆಲೆ ಅನುಮಾನಗೊಂಡ ಮಾಝಿನ್ ಮನೆಯವರು, ಸಂಶಯಗೊಂಡು‌ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಮಾಝಿನ್ ಅವರನ್ನು ದಾಖಲು ಮಾಡಲಾಗಿದೆ. ಬಳಿಕ ಪರೀಕ್ಷಿಸಿದ ವೈದ್ಯರು ಮಾಝಿನ್ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ. ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಕದ್ರಿ‌ ಠಾಣೆ ಪೊಲೀಸರು ಯು.ಡಿ.ಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸ್ಮೆಟಿಕ್ ಸರ್ಜರಿ ಅಥವಾ ಸೌಂದರ್ಯದ ಶಸ್ತ್ರಚಿಕಿತ್ಸೆ ಎಂದು ಕರೆಯಲಾಗುತ್ತದೆ. ಶಸ್ತ್ರಚಿಕಿತ್ಸಾ ಮತ್ತು ವೈದ್ಯಕೀಯ ತಂತ್ರಗಳ ಮೂಲಕ ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸುವುದಾಗಿದೆ. ಇದರಿಂದ ಮುಖವು ಯೌವನ ಅಂದರೆ ವಯಸ್ಸಾದಂತೆ ಕಾಣುವುದನ್ನು ತಪ್ಪಿಸಬಹುದಾಗಿದೆ. ಹೆಚ್ಚಾಗಿ ಸೌಂದರ್ಯದ ಮೇಲೆ ಆಸಕ್ತಿ ಇದ್ದವರು ಇದನ್ನು ಮಾಡಿಸಿಕೊಳ್ಳುತ್ತಾರೆ. ಆದರೆ, ಇದೀಗ ಈ ಶಸ್ತ್ರಚಿಕಿತ್ಸೆಗೆ ಓರ್ವ ಅಸುನೀಗಿದ್ದಾನೆ.

ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಕದ್ರಿ‌ ಠಾಣೆ ಪೊಲೀಸರು UDR ಪ್ರಕರಣ ದಾಖಲಿಸಿಕೊಂಡಿದ್ದಾರೆ.

Mangalore: ಮಾನವ ಹಕ್ಕು ಹೋರಾಟಗಾರ ಪಿ.ಬಿ.ಡೆಸ್ಸಾ ನಿಧನ:

ಮಂಗಳೂರು: ಪಿ.ಬಿ ಡೆಸ್ಸಾ ಅವರು ಇಂದು ನಿಧನರಾಗಿದ್ದು, ಪಿಯುಸಿಎಲ್ ಕರ್ನಾಟಕ  ಅವರ ಕುಟುಂಬ ಮತ್ತು ಸ್ನೇಹಿತರಿಗೆ  ನಮ್ಮ ಹೃದಯ ಸ್ಪರ್ಶಿ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

P. B Desa

ಡೆ’ಸ್ಸಾ ಅವರ ನಿಧನ ತೀವ್ರ ದುಃಖ ತಂದಿದ್ದು  (20 ಮೇ 1941-24 ಸೆಪ್ಟೆಂಬರ್ 2024)ಅವರ ಜೀವಿತ ಕಾಲವಧಿ ಆಗಿದೆ. ಶ್ರೀ ಡಿ’ಸಾ ಅವರು ಪಿಯುಸಿಎಲ್- ಕರ್ನಾಟಕದ ಅಧ್ಯಕ್ಷರಾಗಿದ್ದರು, ರಾಷ್ಟ್ರೀಯ ಪರಿಷತ್ತಿನ ಸದಸ್ಯರಾಗಿದ್ದರು ಮತ್ತು  ಉಪಾಧ್ಯಕ್ಷರಾಗಿದ್ದರು.

ಡೆ’ಸ್ಸಾ  ಅವರು ಮಾನವ ಹಕ್ಕುಗಳ ಅಪ್ರತಿಮ ಚಾಂಪಿಯನ್ ಆಗಿದ್ದರು ಮತ್ತು ಅವರು ನಿಖರ ಮತ್ತು  ನಿರ್ದಿಷ್ಟವಾಗಿ ಮಾನವ ಹಕ್ಕು ಉಲ್ಲಂಘನೆ ವಿರುದ್ಧ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಪ್ರಮುಖವಾಗಿ ಅವರದೇ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೂಡಾ ಕಷ್ಟಸಾಧ್ಯ ಎಂಬ ಸಂಧರ್ಬದಲ್ಲಿ  ಅವರು ಈ ಕಾರ್ಯವನ್ನು ಕೈಗೆತ್ತಿಕೊಂಡು ಕಾರ್ಯ ನಿರ್ವಹಿಸಿದ್ದಾರೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಸತ್ಯಶೋಧನಾ ಕಾರ್ಯಗಳನ್ನು ಪ್ರಾರಂಭಿಸುವಲ್ಲಿ ಮುಂಚೂಣಿಯಲ್ಲಿದ್ದ ಅವರು  ಅನೈತಿಕ ಪೊಲೀಸ್ ಗಿರಿಯನ್ನು ಬಲವಾಗಿ ವಿರೋಧಿಸಿದ್ದಾರೆ.

ಆದರಲ್ಲೂ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿನ ಅನೈತಿಕ ಪೋಲೀಸ್ ಗಿರಿ, ಕಸ್ಟಡಿ ಸಾವುಗಳು, ಕೋಮು ಹಿಂಸಾಚಾರ ಮತ್ತು ದ್ವೇಷದ ಭಾಷಣಗಳನ್ನು ಪ್ರಬಲವಾಗಿ ವಿರೋಧಿಸಿದ್ದು ಅದರ ತಡೆಗಾಗಿ ಕಾರ್ಯ ನಿರ್ವಹಿಸಿದ್ದಾರೆ.

ಶ್ರೀ ಡೆ ‘ಸ್ಸಾ ಅವರು ‘ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ವಿಚಾರಣಾ ಮನೋಭಾವ’ವನ್ನು ಬೆಳೆಸುವ ಮೂಲಭೂತ ಕರ್ತವ್ಯದ ಬದ್ಧತೆಯನ್ನು ಸಾಕಾರಗೊಳಿಸಿದ್ದಾರೆ ಅವರ ನಿಧನದ ನಂತರ ಯಾವುದೇ ‘ಧಾರ್ಮಿಕ ಆಚರಣೆಗಳು, ಹೂವುಗಳು ಮತ್ತು ಹೂಗುಚ್ಛಗಳಿಲ್ಲ’ ಆದರೆ ಅವರ ಆಶಯದಲ್ಲಿ ಅವರ ಪಾರ್ಥಿವ ಶರೀರವನ್ನು  ಸಾಮಾಜಿಕ ಶೈಕ್ಷಣಿಕ ಉದ್ದೇಶಕ್ಕೆ  ದೇಣಿಗೆ’ ನೀಡುವುದನ್ನು ಕಾಣಬಹುದಾಗಿದೆ.

ಅವರ ದೃಷ್ಟಿಕೋನದ ಭಾಗವಾಗಿದ್ದ ‘ವೈಜ್ಞಾನಿಕ ಮನೋಭಾವ’ಕ್ಕೆ ಅನುಗುಣವಾಗಿ, ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಬೇಕೆಂಬುದು ಅವರ ಇಚ್ಛೆಯಾಗಿತ್ತು.

ಮಾನವ ಹಕ್ಕುಗಳ ಹೋರಾಟಗಾರನಾಗಿ, ಡೇ’ಸಾಅವರ ಅನುಪಸ್ಥಿತಿಯನ್ನು ಆಳವಾಗಿ ಅನುಭವಿಸಲಾಗುತ್ತದೆ.  ನಾವು ಸಲ್ಲಿಸಬಹುದಾದ ಅತ್ಯುತ್ತಮ ಗೌರವವೆಂದರೆ ಮಾನವ ಹಕ್ಕುಗಳ ಉದ್ದೇಶಕ್ಕಾಗಿ ನಮ್ಮನ್ನು ಪುನರ್ ಸಮರ್ಪಿಸಿಕೊಳ್ಳುವುದು ಮತ್ತು ಮಾನವ ಹಕ್ಕುಗಳಿಗೆ ಶ್ರೀ ಡಿ’ಸಾ ಅವರ ಜೀವಮಾನದ ಬದ್ಧತೆಯನ್ನು ಅನುಕರಿಸಲು ಪ್ರಯತ್ನಿಸುವುದು ಆಗಿದೆ ಎಂದು ಕರ್ನಾಟಕ ಪಿಯುಸಿಎಲ್ ಅಧ್ಯಕ್ಷ ಅರವಿಂದ್ ನರೈನ್ ಮತ್ತು ಪ್ರಧಾನ ಕಾರ್ಯದರ್ಶಿ ಸುಜಾಯತುಲ್ಲಾ ತಮ್ಮ ಜಂಟಿ ಪ್ರಕ್ರಣೆಯಲ್ಲಿ ಹೇಳಿಕೆ ನೀಡಿದ್ದಾರೆ.

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ

ಮೂಡುಬಿದಿರೆ: ಐತಿಹಾಸಿಕ ಹಿನ್ನಲೆಯುಳ್ಳ ಮೂಡುಬಿದಿರೆ ಅರಮನೆಯ ಹೆಬ್ಬಾಗಿಲು ಘನ ವಾಹನವೊಂದರ ಚಾಲಕನ ನಿರ್ಲಕ್ಷ್ಯಕ್ಕೆ ಅಂಶಿಕ ಹಾನಿಗೊಳಗಾಗಿದೆ.

ತಮಿಳುನಾಡು ನೋಂದಾಯಿತ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಮಾರಕವು ಭಾಗಶಃ ಹಾನಿಗೊಳದಾಗಿದೆ. ಪೋಲಿಸ್ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಟ್ರಕ್ ಚಾಲಕನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಿಂದ ಕೇಸು ದಾಖಲು ಮಾಡಿದ್ದಾರೆ. 700 ವರ್ಷಗಳ ಇತಿಹಾಸ ಹೊಂದಿರುವ ಮೂಡುಬಿದಿರೆ ಅರಮನೆಯು ಜೈನರ ಪರಂಪರೆಯ ಚೌಟರ ಮನೆತನದ ಆಧೀನದಲ್ಲಿದೆ.

ಕುಂದಾಪುರ: ಕಾರಿಗೆ ಬಸ್ಸು ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಕುಂದಾಪುರ: ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ.

ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ತಾಂತ್ರಿಕ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಲಾಯಿತು. 

ನಂತರ ಅವರು ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿರುವ ಬಸ್ಸೊಂದು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಜೀರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ನಾಜೀರ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist