ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶೀಘ್ರದಲ್ಲೇ ಸಂಚರಿಸಿಲಿದೆ ಮಂಗಳೂರು - ಬೆಂಗಳೂರು ವಂದೇ ಭಾರತ್ ರೈಲು; ನಳೀನ್ ಕುಮಾರ್ ಕಟೀಲ್

Twitter
Facebook
LinkedIn
WhatsApp
ಶೀಘ್ರದಲ್ಲೇ ಸಂಚರಿಸಿಲಿದೆ ಮಂಗಳೂರು - ಬೆಂಗಳೂರು ವಂದೇ ಭಾರತ್ ರೈಲು; ನಳೀನ್ ಕುಮಾರ್ ಕಟೀಲ್

ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್‌” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಬಗ್ಗೆ ನಳಿನ್ x ಮಾಡಿದ್ದು ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ