ಮಂಗಳೂರು: ಜ.21ರಂದು ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ

ಬೆಂಗಳೂರು: ಇದೇ ತಿಂಗಳ 21ರಂದು ಭಾನುವಾರ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು/ಆಕಾಂಕ್ಷಿಗಳು, ಎಐಸಿಸಿ/ಕೆಪಿಸಿಸಿ ಸದಸ್ಯರು, ಡಿಸಿಸಿ/ಬಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಎಲ್ಲಾ ಹಂತದ ಅಧ್ಯಕ್ಷರು, ಜಿಲ್ಲಾ/ತಾಲೂಕು ಪಂಚಾಯಿತಿ ಮಾಜಿ ಸದಸ್ಯರು/ಪರಾಜಿತ ಅಭ್ಯರ್ಥಿಗಳು, ಮಹಾನಗರ ಪಾಲಿಕೆ, ನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಪರಾಜಿತ ಅಭ್ಯರ್ಥಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಮಟ್ಟದಿಂದ ಬೂತ್ ಮಟ್ಟದವರೆಗೆ ಎಲ್ಲಾ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕು ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.
ಈ ಸಮಾವೇಶವನ್ನು ಆಯೋಜಿಸಿರುವ ಬಗ್ಗೆ ಎಲ್ಲ ಹಂತದ ಮುಖಂಡರುಗಳಿಗೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರಿಗೆ ಮಾಹಿತಿ ನೀಡಿ, ತಪ್ಪದೇ ಭಾಗವಹಿಸುವಂತೆ ನೋಡಿಕೊಳ್ಳುವ ಜವಬ್ದಾರಿ ವಹಿಸಿಕೊಂಡು ಆ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ಕೋರಿದ್ದಾರೆ.
ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ
ಬೆಂಗಳೂರು: ಕೃಷ್ಣರಾಜ ಸಾಗರ (KRS) ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ (High Court) ಮಹತ್ವದ ಆದೇಶ ಪ್ರಕಟಿಸಿದೆ.
ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ (Mining) ನಡೆಸಬಾರದು. ಕೆಆರ್‌ಎಸ್ ಜಲಾಶಯಕ್ಕೆ ಹಾನಿ ಮಾಡುವುದನ್ನು ತಡೆಗಟ್ಟಬೇಕಿದೆ. ಕೆಆರ್‌ಎಸ್ ಸುರಕ್ಷತೆ ನಮಗೆ ಮುಖ್ಯ ಎಂದು ಹೈಕೋರ್ಟ್ ಮುಖ್ಯ ನಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗಿಯ ಪೀಠ ಹೇಳಿದೆ.
https://www.facebook.com/SumalathaAmbi/posts/910058523809924?ref=embed_post
ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ ನಡೆಸಿ ಹಾನಿ ಸಾಧ್ಯತೆ ಪರಿಗಣಿಸಿ ಅನುಮತಿಯ ಷರತ್ತು ಹಾಕಿದ್ದ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಪ್ರಕಟಿಸಿದೆ.
ಸರ್ಕಾರದ ನಿರ್ದೇಶನದಂತೆ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಲಾಗಿದ್ದು, ಅಲ್ಲಿಯವರೆಗೆ ಗಣಿಗಾರಿಕೆಗೆ ಅನುಮತಿಸುವುದಿಲ್ಲ. ಗಣಿಗಾರಿಕೆಗೆ ಆದೇಶ ನೀಡಿದರೆ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಹಾನಿಯಾಗಲಿದೆ. ಕೆಆರ್‌ಎಸ್ ಅನ್ನು ಅಲ್ಲಿನ ಜನರ ರಕ್ತ ಮತ್ತು ಬೆವರಿನಿಂದ ಕಟ್ಟಲಾಗಿದೆ. ಜಲಾಶಯಕ್ಕೆ (Dam) ಏನಾದರೂ ತೊಂದರೆಯಾದರೆ ಏನು ಮಾಡುವುದು ಎಂದು ಪ್ರಶ್ನಿಸಿದರು.
ಕೆಆರ್‌ಎಸ್ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಈ ಕಾರಣಕ್ಕೆ ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು ಎಂದು ವಿಭಾಗೀಯ ಪೀಠ ಆದೇಶ ಪ್ರಕಟಿಸಿದೆ.