ಬುಧವಾರ, ಮೇ 8, 2024
ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಜಾಮೀನು ಮಂಜೂರು

Twitter
Facebook
LinkedIn
WhatsApp
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಜಾಮೀನು ಮಂಜೂರು

2022 ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಝಿಲ್ ಹತ್ಯೆ ನಡೆಸಿದ ಪ್ರಮುಖ 3 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.

ಸುರತ್ಕಲ್ ಮಂಗಳಪೇಟೆಯ ಮೊಹಮ್ಮದ್ ಫಾಝಿಲ್ ಹತ್ಯೆಯ A1 ಆರೋಪಿ ಸುಹಾಸ್ ಶೆಟ್ಟಿ, A2 ಆರೋಪಿ ಅಭಿಷೇಕ್, A3 ಆರೋಪಿ ನೇಪಾಳಿ ಗಣೇಶ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

ಫಾಝಿಲ್ ಹತ್ಯೆಯಲ್ಲಿ ಒಟ್ಟು 8 ಪ್ರಮುಖ ಆರೋಪಿಗಳ ಬಂಧನವಾಗಿತ್ತು. ಐವರು ಆರೋಪಿಗಳು ಈಗಾಗಲೇ ಜಾಮೀನಿನಲ್ಲಿ ಹೊರ ಬಂದಿದ್ದಾರೆ. ಇದೀಗ ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು ಆಗಿದೆ. ಈ ಮೂಲಕ‌ ಫಾಝಿಲ್ ಹತ್ಯೆಯ ಎಲ್ಲ ಆರೋಪಿಗಳೂ ಬಂಧಮುಕ್ತರಾದಂತಾಗಿದೆ.

2022 ಜುಲೈ 28ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮೊಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ದಾಳಿ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಝಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಫಾಝಿಲ್ ಕೊನೆಯುಸಿರೆಳೆದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ