ಮಂಗಳೂರು : ಐಸ್ ಕ್ರೀಮ್ ಪಾರ್ಲರ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
Twitter
Facebook
LinkedIn
WhatsApp

ಐಸ್ ಕ್ರೀಮ್ ಪಾರ್ಲರ್ ಒಂದರ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಿಲಾರ್ ನ ಗೋಡೌನ್ ನಲ್ಲಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂದು ಗುರುತಿಸಲಾಗಿದೆ.
ಈತ ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ.ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತರೊಂದಿಗೆ ವಾಸವಿದ್ದ.
ಬೆಳಿಗ್ಗೆ ಸ್ಥಳೀಯ ಯುವಕರು ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ