ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು.!
ಮಂಗಳೂರು: ಬೋಳಾರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಮ್ಯಾಪ್ನಲ್ಲಿ ಯಾರೋ ಕಿಡಿಗೇಡಿಗಳು ತಿದ್ದಿರುವ ವಿಚಾರ ಬೆಳಕಿಗೆ ಬಂದಿದೆ.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟ ಈ ದೇವಸ್ಥಾನದ ಹೆಸರನ್ನು “ಬೋಳಾರ್ ಶೇಕ್ ಉಮರ್ ಸಾಹೇಬ್ ಕಾಂಪೌಂಡು’ ಎಂದು ತಿದ್ದಿರುವುದು ಮಂಗಳವಾರ ದೇಗುಲದ ಆಡಳಿತ ಮಂಡಳಿಯ ಗಮನಕ್ಕೆ ಬಂದಿದೆ.
ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯನ್ನುಂಟು ಮಾಡುವ ಮತ್ತು ಸಾಮರಸ್ಯವನ್ನು ಭಂಗ ಗೊಳಿಸುವ ದುರುದ್ದೇಶದಿಂದ ಈ ರೀತಿ ತಿದ್ದಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಗೂಗಲ್ ಮ್ಯಾಪ್ನಲ್ಲಿ “ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ’ ಎಂದು ತಿದ್ದುಪಡಿ ಮಾಡಿ ಸರಿಪಡಿಸಿಕೊಡಬೇಕು ಎಂದು ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು ಲೇಡಿಹಿಲ್ ಈಜುಕೊಳದಲ್ಲಿ ನೀರಲ್ಲಿ ಮುಳುಗಿ ವ್ಯಕ್ತಿ ಮೃತ್ಯು..!
ಮಂಗಳೂರು : ಮಂಗಳೂರು ನಗರದ ಲೇಡಿಹಿಲ್ ಬಳಿಯ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ವ್ಯಕ್ತಿಯೋರ್ವರು ಮುಳುಗಿ ಸಾವನ್ನಪಿದ್ದಾರೆ.
ಮಂಗಳವಾರ ಸಂಜೆ 4 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ಮೃತನನ್ನು ಬಿಹಾರ ಮೂಲದ ಅಭಿಷೇಕ್ (35) ಎಂದು ಗುರುತ್ತಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ನಿರ್ವಹಣೆ ಮಾಡುವ ಈ ಈಜುಕೊಳದಲ್ಲಿ ಈಜುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ, 15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ಅಭಿಷೇಕರನ್ನು ಈಜುಕೊಳದ ಜೀವರಕ್ಷಕರಾದ ರಾಜೇಂದ್ರ ಮತ್ತು ಪುಂಡಲಿಕ್ ಅವರು ಕೂಡಲೇ ಮೇಲಕ್ಕೆ ತಂದಿದ್ದರೂ. ಸ್ಥಳದಲ್ಲಿದ್ದ ಪ್ರೊ, ನರೇಂದ್ರ ನಾಯಕ್ ಮತ್ತು ಇತರರು ಸಿಪಿಆರ್ ಮಾಡಿ ಉಸಿರಾಡುವಂತೆ ಮಾಡಿದ ಪ್ರಯತ್ನ ವಿಫಲವಾಯಿತು ಎಂದು ಹೇಳಲಾಗಿದೆ. ಅಭಿಷೇಕ್ ಸಾವು ನೀರಲ್ಲಿ ಉಸಿರುಗಟ್ಟಿ ಸಂಭವಿಸಿದೆಯೇ ಅಥವಾ ಹೃದಯಾಘಾತದಿಂದ ಸಂಭವಿಸಿದೆಯೆ ಎಂದು ತನಿಖೆಯಿಂದ ತಿಳಿದುಬರಬೇಕಿದೆ. ಬರ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ಹು ಆಸ್ಪತ್ರೆಗೆ ರವಾನೆ ಮಾಡಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.