ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಚುನಾವಣಾ ಕರ್ತವ್ಯದಲ್ಲಿದ್ದ ಪಿಡಿಓ ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ..!

Twitter
Facebook
LinkedIn
WhatsApp
ಮಂಗಳೂರು : ಚುನಾವಣಾ ಕರ್ತವ್ಯದಲ್ಲಿದ್ದ ಪಿಡಿಓ ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ..!

ಮಂಗಳೂರು : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಯೋರ್ವರು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ಎ. 2) ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಭವಿಸಿದೆ.

ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿಯಾಗಿದ್ದು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರು ಕೂಡ ಶ್ರೀಧರ ಹೆಗಡೆಯವರಾಗಿದ್ದಾರೆ. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾಗಿದ್ದರು. ಹಾಗಾಗಿ ಶ್ರೀಧರ ಹೆಗಡೆ ಅವರು ಫೆಬ್ರವರಿಯಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು ಎನ್ನಲಾಗಿದೆ. 

ಕೂಡಲೇ ಅವರನ್ನು ನಗರದ ಜಿಲ್ಲಾ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಆರೈಕೆಗಾಗಿ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಇವರ ಪತ್ನಿ ಜಯಂತಿ ಸ್ಟಾಫ್ ನರ್ಸ್ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್‌ ಲೆಕ್ಕಾಧೀಕ್ಷಕ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಆರೈಕೆಗೆ ನೆರವಾಗಿದ್ದಾರೆ.

ಡಾ. ಆನಂದ್ ಹಾಗೂ ಸಂತೋಷ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ