ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಲೇಡಿಹಿಲ್ ಬಳಿ ಭೀಕರ ಕಾರ್ ಹಿಟ್ ಅಂಡ್ ರನ್ ಕೇಸ್; ಯುವತಿ ಸ್ಥಳದಲ್ಲೇ ಮೃತ್ಯು-ನಾಲ್ವರು ಗಂಭೀರ!

Twitter
Facebook
LinkedIn
WhatsApp
ಮಂಗಳೂರು: ಲೇಡಿಹಿಲ್ ಬಳಿ ಭೀಕರ ಕಾರ್ ಹಿಟ್ ಅಂಡ್ ರನ್ ಕೇಸ್; ಯುವತಿ ಸ್ಥಳದಲ್ಲೇ ಮೃತ್ಯು-ನಾಲ್ವರು ಗಂಭೀರ!

ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದ ಕಾರಿನ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ನಗದ ಲೇಡಿ ಹಿಲ್ ಮಣ್ಣಗುಡ್ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ, ಮೃತ ಯುವತಿಯನ್ನು ಸುರತ್ಕಲ್ ಬಾಳದ ರೂಪಶ್ರೀ (23) ಎಂದು ಗುರುತ್ತಿಸಲಾಗಿದೆ.

ಸ್ವಾತಿ(26) ಹಿತಾನ್ವಿ(16), ಕೃತಿಕಾ(16), ಯತಿಕಾ912) ಗಂಭೀರ ಗಾಯಗೊಂಡ ಇತರ ನಾಲ್ವರು ಯುವತಿಯರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬುಧವಾರ ಅಪರಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಹುಂಡೈ ಇಯೋನ್ ಗಾಡಿ ಸಂಖ್ಯೆKA 19 MD 5676 ನೋಂದಣಿ ಹೊಂದಿದ್ದ ಕಾರು ಮಣ್ಣಗುಡ್ಡ ಕಡೆಯಿಂದ ಲೇಡಿಹಿಲ್ ಕಡೆಗೆ ಅತೀ ವೇಗ ಮತ್ತು ನಿರ್ಲಕ್ಷ್ಯದ ದ ಚಾಲನೆಯೊಂದಿಗೆ ಬಂದಿದ್ದು ಎಸ್‌ ಎಲ್ ಶೇಟ್ ಜ್ಯುವೆಲ್ಲರಿ ಬಳಿ ಫುಟ್‌ ಪಾತಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹಾರಿಸಿಕೊಂಡು ಹೋಗಿದ್ದಾನೆ,

ಅಪಘಾತ ನಡಸಿದ ಬಳಿಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದ ಚಾಲಕ ಕಮಲೇಶ್ ಬಲದೇವ್ ಕಾರನ್ನು ಹೋಂಡಾ ಶೋ ರೂಂ ಬಳಿ ನಿಲ್ಲಿಸಿ ಮನೆಗೆ ಹೋಗಿದ್ದಾನೆ. ಬಳಿಕ  ತಂದೆ ಹೆಚ್‌ಎಂ ಬಲದೇವ್ ಅವರೊಂದಿಗೆ ಪಶ್ಚಿಮ ಸಂಚಾರಿ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಅಪಘಾತ ಭೀಕರ ದೃಶ್ಯ ಸ್ಥಳೀಯ ಸಿಸಿ ಟಿವಿಯಲ್ಲಿ ದಾಖಲಾಗಿದೆ

ಮಂಗಳೂರು ನಗರದಲ್ಲಿ ಡ್ರಂಕ್ ಅಂಡ್ ಡ್ರೈವ್, ಅತೀ ವೇಗ ಮತ್ತು ಅಪಾಯಕಾರಿ ಚಾಲನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ದಾರಿಯಲ್ಲಿ ಹೋಗುವ ಅಮಾಯಕರು ಬಲಿಯಾಗುತ್ತಿರುವುದು ದುರಂತವೇ ಸರಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ