ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕ ನೀರುಪಾಲು..!
ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ ಘಟನೆ ಸಂಭವಿಸಿದೆ. ಬಜ್ಪೆ ನಿವಾಸಿ ಸದ್ಯ ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್ (30) ಮೃತ ದುರ್ದೈವಿಯಾಗಿದ್ದಾನೆ. ಶಾಕಿರ್ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಶಾಕಿರ್ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.