ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ಮೈ ಮೇಲೆ ಪ್ರೇತ ಬರುತ್ತೆ ಎಂದು ಮೂರು ತಿಂಗಳಿಂದ ಕೊಠಡಿಯಲ್ಲಿ ಮಹಿಳೆ ದಿಗ್ಬಂಧನ...!

Twitter
Facebook
LinkedIn
WhatsApp
ಮಂಗಳೂರು: ಮೈ ಮೇಲೆ ಪ್ರೇತ ಬರುತ್ತೆ ಎಂದು ಮೂರು ತಿಂಗಳಿಂದ ಕೊಠಡಿಯಲ್ಲಿ ಮಹಿಳೆ ದಿಗ್ಬಂಧನ...!

ಮಂಗಳೂರು, ಜ.03: ಮೈ ಮೇಲೆ ಪ್ರೇತ ಬರುತ್ತೆ (Spirit Invocation) ಎಂದು ಮಹಿಳೆಯನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಎಂಬಲ್ಲಿ ನಡೆಸಿದೆ. ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ದಿಗ್ಬಂಧನದಿಂದ ಮಹಿಳೆಯನ್ನು ಬಿಡುಗಡೆಗೊಳಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮೈ ಮೇಲೆ ಪ್ರೇತ ಬರುತ್ತೆ ಎಂದು ಕಳೆದ ಮೂರು ತಿಂಗಳಿನಿಂದ ಮಹಿಳೆಯನ್ನು ಕೊಠಡಿಯಲ್ಲಿ ಬಂಧಿಸಲಾಗಿತ್ತು. ಶ್ರೀಪತಿ ಹೆಬ್ಬಾರ್ ಎಂಬಾತನ ಪತ್ನಿ ಆಶಾಲತಾ ಅವರನ್ನು ದಿಗ್ಬಂಧನದಲ್ಲಿಡಲಾಗಿತ್ತು. ಶ್ರೀಪತಿ ಹೆಬ್ಬಾರ್ ಅಡುಗೆ ವೃತ್ತಿ ಮಾಡುತ್ತಾರೆ. ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆಶಾಲತಾ ಜೊತೆ ಅಂತರ್ಜಾತಿ ವಿವಾಹವಾಗಿದ್ದರು. ಆಕೆಯ ಮೇಲೆ‌ ಪ್ರೇತ ಬರುತ್ತಿದೆ ಎಂದು ಆರೋಪಿಸಿ ಮನೆ ಪಕ್ಕದ ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು. 

ಕೇವಲ ಒಂದು ಹೊತ್ತು ಚಹಾ ಮತ್ತು ಬಿಸ್ಕತ್ತು ತಿನ್ನಲು ನೀಡಲಾಗುತ್ತಿತ್ತು. ಸ್ಥಳೀಯರ ದೂರಿನ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ರಕ್ಷಿಸಲಾಗಿದೆ.

ಉಡುಪಿ: ಕೆಂಡ ಹಾಯುವಾಗ ಆಯತಪ್ಪಿ ನಿಗಿನಿಗಿ ಕೆಂಡಗಳ ಮೇಲೆ ಬಿದ್ದ ಅಯ್ಯಪ್ಪ ಮಾಲೆಧಾರಿ, ಆಸ್ಪತ್ರೆಗೆ ದಾಖಲು

ಉಡುಪಿ:  ಮಮೂಲುಕೆಂಡ ಹಾಯುವುದು ಒಂದು ಧಾರ್ಮಿಕ ಸಂಪ್ರದಾಯವಾಗಿರುವುದರಿಂದ (religious custom) ಅದರ ಬಗ್ಗೆ ನೆಗೆಟಿವ್ ಧೋರಣೆಯಲ್ಲಿ ಮಾತಾಡೋದು ಅಸಂಮಜಸ ಅನಿಸುತ್ತದೆ ಮತ್ತು ವಿವಾದಕ್ಕೂ ಕಾರಣವಾಗಬಹುದು. ಆದರೆ ಕೆಂಡ ಸೇವೆ ನಡೆಯುವಾಗ ಅವಘಡಗಳು ಸಂಭವಿಸುವುದು ಅನ್ನುವಷ್ಟು ಸಾಮಾನ್ಯವಾಗಿಬಿಟ್ಟಿದೆ. ಉಡುಪಿಯ ಮಲ್ಪೆ ಅಯ್ಯಪ್ಪ ಮಂದಿರದ (Ayyappa temple ) ವಾರ್ಷಿಕೋತ್ಸವದ ಅಂಗವಾಗಿ ನಡೆದ ಕೆಂಡಸೇವೆಯಲ್ಲಿ ಅಯ್ಯಪ್ಪ ಮಾಲೆಧಾರಿಯೊಬ್ಬರು (Ayyappa devotee) ಕೆಂಡಹಾಯುವಾಗ ಆಯ ತಪ್ಪಿ ನಿಗಿನಿಗಿ ಕೆಂಡಗಳಲ್ಲಿ ಬೀಳುವ ದೃಶ್ಯ ಭಯಾನಕವಾಗಿದೆ. 

ಇಲ್ಲಿ ಮಾಲೆಧಾರಿಗಳು ಕೆಂಡಗಳ ಮೇಲೆ ಒಂದು ಬದಿಯಿಂದ ಮತ್ತೊಂದು ಬದಿಗೆ ಓಡುತ್ತಿಲ್ಲ. ಬದಲಿಗೆ ಕೆಂಡಗಳ ಮೇಲೆ ಕುಪ್ಪಳಿಸುತ್ತಾ ಮುಂದೆ ಸಾಗುತ್ತಾರೆ. ಮಾಲೆಧಾರಿ ಭಕ್ತ ಬಿದ್ದಕೂಡಲೇ ಅಲ್ಲಿದ್ದ ಜನ ಅವರ ನೆರವಿಗೆ ಧಾವಿಸಿದ್ದಾರೆ ಮತ್ತು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಕರಾವಳಿ ಪ್ರದೇಶದಲ್ಲಿ ಅಯ್ಯಪ್ಪ ಮಾಲೆಧಾರಿಗಳು ಕೆಂಡಸೇವೆಯಲ್ಲಿ ಭಾಗಿಯಾಗುವುದು ಸಾಂಪ್ರದಾಯಿಕ ವಾಡಿಕೆಯಾಗಿದೆ. ಕೆಂಡದ ಬಳಿಯಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ಭೀತಿ ಹುಟ್ಟಿಸುವ ದೃಶ್ಯವನ್ನು ಸೆರೆಹಿಡಿದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist