ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

Twitter
Facebook
LinkedIn
WhatsApp
ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ.
ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದೆ. ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ ಪಡೆದ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ ಮೊಹಮ್ಮದ್ ತಿಳಿಸಿದ್ದಾರೆ.
ಬೆಳ್ತಂಗಡಿ: ಬಂದರ್‌ನಲ್ಲಿ ಒಂಟಿ ಸಲಗ ದಾಳಿ- ಭತ್ತ ಬೆಳೆ ನಾಶ
ಬೆಳ್ತಂಗಡಿ:ತಾಲೂಕಿನ ಬಂದರು ಗ್ರಾಮದ ಕುಂತಲಪಳಿಕೆ ನೆಲ್ಲಿಗೇರು ಎಂಬಲ್ಲಿ ಬುಧವಾರ ಮುಂಜಾನೆ ಒಂಟಿ ಆನೆಯೊಂದು ಬೆಳೆ ನಾಶ ಮಾಡಿದ ಘಟನೆ ನಡೆದಿದೆ.
ನೇತ್ರಾವತಿ ನದಿ ಸಮೀಪದ ಬೀಬಿಮಜಲು ಪ್ರದೇಶದಲ್ಲಿ ಮಂಗಳವಾರ ಸಂಜೆ ಆನೆಯ ಕಹಳೆಯನ್ನು ಗ್ರಾಮಸ್ಥರು ಕೇಳಿದ್ದಾರೆ. ಬುಧವಾರ ಮುಂಜಾನೆ ಅದೇ ಆನೆ ಮೋನಪ್ಪ ಗೌಡ ಎಂಬುವವರ ಜಮೀನಿಗೆ ನುಗ್ಗಿ ಭತ್ತದ ಬೆಳೆ ನಾಶಪಡಿಸಿದೆ. ಜತೆಗೆ ರಾಮಣ್ಣ ಎಂಬುವವರ ಜಮೀನಿನ ಕೃಷಿ ಪಂಪ್ ಮತ್ತು ಕೇಬಲ್‌ಗೂ ಆನೆ ಹಾನಿ ಮಾಡಿದೆ. ಅರಣ್ಯಾಧಿಕಾರಿಗಳು ಜಮೀನಿಗೆ ಭೇಟಿ ನೀಡಿ ನಷ್ಟದ ಅಂದಾಜು ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ