ಮಂಗಳೂರು : ಬೈಕಂಪಾಡಿಯ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ
ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನಫರ್ಫ್ಯೂಮ್ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಸುಗಂಧ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸ್ಥಳೀಯರು ಹಾಗು ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ ದಳ ಕರೆ ಮಾಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ, ಕದ್ರಿ, ಮತ್ತು ಎಮ್ ಆರ್ ಪಿ ಎಲ್ ನ ಅಗ್ನಿಶಾಮಕ ಸಿಬ್ಬಂದಿಗಳು ಹರ ಸಾಹಸ ಪಡಬೇಕಾಯಿತು. ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ಸುಮಾರು ಮೂರು ಘಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಅಗ್ನಿ ದುರಂತಕ್ಕೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ. ಪಣಂಬೂರು ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನದ ಬೇಟೆ : 98,68,750 ಮೌಲ್ಯದ ಚಿನ್ನ ವಶಕ್ಕೆ..!
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನದ ಬೇಟೆಯಾಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಅಬುಧಾಬಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ್ನಲ್ಲಿ ಈ ಬೃಹತ್ ಪ್ರಮಾಣದ ಅಕ್ರಮ ಚಿನ್ನ ದೊರೆತಿದೆ. ಅನುಮಾನಾಸ್ಪದ ಚಲನವಲನದ ಆಧಾರದ ಮೇಲೆ ಆತನನ್ನು ವಿಚಾರಣೆ ನಡೆಸಿ ಅವರ ದೇಹವನ್ನು ಪರೀಕ್ಷಿಸುವಾಗ, ಅವರ ಸೊಂಟದ ಪ್ರದೇಶದಲ್ಲಿ ಬೀಪ್ ಶಬ್ದ ಹೊರಹೊಮ್ಮಿದೆ. ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿರುವ 5 ಅಂಡಾಕಾರದ ಆಕಾರದ ಕ್ಯಾಪ್ಸೂಲ್ ಗಳನ್ನು ಅವನ ಗುದನಾಳದಲ್ಲಿ ಮರೆಮಾಡಿ ಸಾಗಾಟ ಮಾಡುತ್ತಿರುವುದು ಬಯಲಾಗಿದ್ದು ಆತನಿಂದ ವಶಕ್ಕೆ ಪಡೆಯಲಾಗಿದೆ. ಇದು 24 ಕ್ಯಾರೆಟ್ ಶುದ್ಧತೆಯ ಚಿನ್ನವಾಗಿದ್ದು 1,579.000 ಗ್ರಾಂ ತೂಕ ಹೊಂದಿದೆ. ಇದರ ಮೌಲ್ಯ ಸುಮಾರು ರೂ. 98,68,750 ಆಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ.