ಮಂಗಳೂರು: ಕರ್ತವ್ಯದಲ್ಲಿ ಇದ್ದಾಗಲೇ ಗುಪ್ತಚರ ಇಲಾಖೆ ಸಿಬ್ಬಂದಿಗೆ ಹೃದಯಾಘಾತ; ಸ್ಥಳದಲ್ಲೇ ಸಾವು!
Twitter
Facebook
LinkedIn
WhatsApp
ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಇಂದು ನಡೆದಿದೆ.
ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತರು.
ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ.
ಇನ್ನು 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಇನ್ನೂ ಏಳು ವರ್ಷಗಳ ಕಾಲ ಕರ್ತ್ಯವ್ಯ ನಿರ್ವಹಿಸಬೇಕಿತ್ತು. ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿಯೂ ಆಗಿದ್ದರು.