ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಪತ್ರವನ್ನು ಹರಿದು ಹಾಕಿ ವಿರೋಧಿಸಿದ ಬೆಂಬಲಿಗರು

Twitter
Facebook
LinkedIn
WhatsApp
kangana ranaut 164853358370 1

ಇಂಫಾಲ: ಕಳೆದ 2 ತಿಂಗಳಿನಿಂದ ಮಣಿಪುರದಲ್ಲಿ (Manipur) ನಡೆಯುತ್ತಿರುವ ಹಿಂಸಾಚಾರವನ್ನು ನಿಭಾಯಿಸುವಲ್ಲಿ ವಿಫಲವಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh) ಅವರು ಶುಕ್ರವಾರ ರಾಜೀನಾಮೆ ನೀಡಲು ಮುಂದಾಗಿದ್ದರು. ಈ ವೇಳೆ ರಾಜೀನಾಮೆಯನ್ನು ವಿರೋಧಿಸಿದ ಮಹಿಳೆಯೊಬ್ಬರು ಅವರ ಪತ್ರವನ್ನು (Resignation Letter) ಹರಿದು ಹಾಕಿರುವ ಘಟನೆ ನಡೆದಿದೆ.

ಬಿರೇನ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಹಿಡಿದು ರಾಜ್ಯಪಾಲರ ಭವನಕ್ಕೆ ಹೊರಟಿದ್ದರು. ಆದರೆ ಇಂಫಾಲದಲ್ಲಿರುವ ಸಿಎಂ ನಿವಾಸದ ಹೊರಗಡೆ ಅವರ ಬೆಂಬಲಿಗರು ಜಮಾಯಿಸಿ ರಾಜೀನಾಮೆಯನ್ನು ವಿರೋಧಿಸಿದ್ದಾರೆ. ಇಬ್ಬರು ಸಚಿವರು ನಿವಾಸದಿಂದ ಹೊರಗೆ ಬಂದಾಗ ಅವರ ರಾಜೀನಾಮೆ ಪತ್ರವನ್ನು ಮಹಿಳೆಯೊಬ್ಬರು ಕಸಿದುಕೊಂಡು ಅದನ್ನು ಹರಿದು ಹಾಕಿದ್ದಾರೆ.

ಇದೀಗ ರಾಜೀನಾಮೆ ಅಂಚಿನಲ್ಲಿದ್ದ ಬಿರೇನ್ ಸಿಂಗ್ ಸಾರ್ವಜನಿಕರ ಒತ್ತಡಕ್ಕೆ ಮಣಿದು ತಮ್ಮ ಮನಸ್ಸನ್ನು ಬದಲಾಯಿಸಿದ್ದಾರೆ ಎಂದು ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. 

ಕಳೆದ 2 ತಿಂಗಳಿನಿಂದ ಮಣಿಪುರದಲ್ಲಿ ಎಸ್‌ಟಿ ಮೀಸಲಾತಿ ವಿಚಾರವಾಗಿ ಮೇಟಿ ಹಾಗೂ ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ನಡೆಯುತ್ತಿದೆ. ಎರಡು ಸಮುದಾಯಗಳ ಜನಾಂಗೀಯ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 100ಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ