ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಣಿಪುರ :ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ ; ನಾಲ್ವರ ಬಂಧನ.!

Twitter
Facebook
LinkedIn
WhatsApp
ಮಣಿಪುರ :ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ ; ನಾಲ್ವರ ಬಂಧನ.!

ಇಂಫಾಲ್: ಜುಲೈನಲ್ಲಿ ಮಣಿಪುರದಲ್ಲಿ (Manipur) ನಡೆದ ಇಬ್ಬರು ವಿದ್ಯಾರ್ಥಿಗಳ (Manipur Students) ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) ನಾಲ್ವರನ್ನು ಬಂಧಿಸಿದೆ. ಅಲ್ಲದೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ಫೋಟೋ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ. ವಶಕ್ಕೆ ಪಡೆಯಲಾಗಿರುವ ಇಬ್ಬರು ಹುಡುಗಿಯರು ಎನ್ನಲಾಗಿದೆ. ಬಂಧಿತ ನಾಲ್ವರನ್ನು ಅಸ್ಸಾಂನ (Assam) ಗುವಾಹಟಿಗೆ ರವಾನಿಸಲಾಗಿದೆ.

ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ ಚುರಾಚಂದ್‌ಪುರ ಮೂಲದ ದಂಗೆಕೋರ ಗುಂಪಿನ ವ್ಯಕ್ತಿಯೊಬ್ಬನ ಪತ್ನಿ ಎಂದು ಹೇಳಲಾಗಿದೆ. ಮಣಿಪುರ ಪೋಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆ ಚುರಚಂದ್‌ಪುರದಿಂದ ಸೆರೆಹಿಡಿದಿದೆ.

ಪ್ರಕರಣ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಅವರು, ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅಪರಾಧಿಗಳನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಚುರಚಂದ್‌ಪುರದಿಂದ ಬಂಧಿಸಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ. 

ಜುಲೈ 6 ರಂದು ಇಬ್ಬರು ಮಣಿಪುರಿ ಯುವಕರು ನಾಪತ್ತೆಯಾಗಿದ್ದರು. ಸೆಪ್ಟೆಂಬರ್ 25 ರಂದು ಈಶಾನ್ಯ ರಾಜ್ಯದಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದವು. ಕಾಣೆಯಾಗಿದ್ದ ಫಿಜಾಮ್ ಹೇಮಾನ್‌ಜಿತ್ ಮತ್ತು ಹಿಜಾಮ್ ಲಿಂಥೋಯಿಂಗಂಬಿ ಅವರ ಪಾರ್ಥಿವ ಶರೀರವನ್ನು ತೋರಿಸುವ ವೀಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು. ಇದರಿಂದ ಮಣಿಪುರದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ