ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Manipur Video ಮಣಿಪುರ ವಿಡಿಯೋ ಪ್ರಕರಣ : ಪೊಲೀಸರಿಗೆ ಎಫ್ಐಆರ್ ದಾಖಲಿಸಲು 14 ದಿನಗಳು ಏಕೆ ಬೇಕಾಯಿತು? ಸುಪ್ರೀಂಕೋರ್ಟ್ ತರಾಟೆ!

Twitter
Facebook
LinkedIn
WhatsApp
Manipur Video ಮಣಿಪುರ ವಿಡಿಯೋ ಪ್ರಕರಣ : ಪೊಲೀಸರಿಗೆ ಎಫ್ಐಆರ್ ದಾಖಲಿಸಲು 14 ದಿನಗಳು ಏಕೆ ಬೇಕಾಯಿತು? ಸುಪ್ರೀಂಕೋರ್ಟ್ ತರಾಟೆ!

ನವದೆಹಲಿ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊಗೆ  (Manipur Video) ಸಂಬಂಧಿಸಿದ ಮನವಿಯನ್ನು ಆಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಮೇ 4 ರಂದು ಈ ಘಟನೆ ಬೆಳಕಿಗೆ ಬಂದಿದೆ. ಮೇ 18 ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಣಿಪುರ ಪೊಲೀಸರು 14 ದಿನಗಳ ಕಾಲ ಏನು ಮಾಡಿದರು ಎಂದು ಪ್ರಶ್ನಿಸಿದರು. ಎರಡು ತಿಂಗಳ ಹಿಂದೆ ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಇದು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಏಕೈಕ ಉದಾಹರಣೆಯಲ್ಲ ಎಂದು ಉಲ್ಲೇಖಿಸಿದರು.

ಎಫ್‌ಐಆರ್‌ಗಳ ವಿವರ ಕೊಡಿ

ಈ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಬಗ್ಗೆ ವಿವರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಯಲ್ಲಿ ಸ್ಥಳಾಂತರಗೊಂಡವರ ತನಿಖೆ ಮತ್ತು ಪುನರ್ವಸತಿಗಾಗಿ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಸಹ ಅದು ಕೇಳಿದೆ.ಬೆತ್ತಲೆಯಾಗಿ ಪರೇಡ್ ಮಾಡಿರುವ ವಿಡಿಯೋವನ್ನು (Manipur Video) ಭಯಾನಕ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮತ್ತು ದಾಖಲಾದ ಎಫ್‌ಐಆರ್‌ಗಳಲ್ಲಿ ಇದುವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಕೇಳಿದೆ. ರಾಜ್ಯ ಪೊಲೀಸರು ಈ ವಿಷಯವನ್ನು ತನಿಖೆ ಮಾಡಲು ನಾವು ಬಯಸುವುದಿಲ್ಲ ಎಂದು ಕೋರ್ಟ್ ಹೇಳಿದೆ.

ಹಿಂಸಾಚಾರ ಪೀಡಿತ ರಾಜ್ಯದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಎಸ್‌ಐಟಿ ಅಥವಾ ಮಾಜಿ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯನ್ನು ರಚಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿದಂತೆ ದಾಖಲಾದ ಒಟ್ಟು ಎಫ್‌ಐಆರ್‌ಗಳ ಸಂಖ್ಯೆ, ನಿರ್ದಿಷ್ಟ ರೀತಿಯ ಎಫ್‌ಐಆರ್‌ಗಳು, ಪ್ರಾರಂಭಿಸಲಾದ ಶೂನ್ಯ ಎಫ್‌ಐಆರ್‌ಗಳ ಎಣಿಕೆ ಮತ್ತು ವರ್ಗಾಯಿಸಲಾದ ಪ್ರಕರಣಗಳ ಸಂಖ್ಯೆಗೆ ಸಂಬಂಧಿಸಿದಂತೆ ವಿವರವಾದ ಮಾಹಿತಿಯನ್ನು ನ್ಯಾಯಾಲಯ ಕೇಳಿದೆ.

ಸಿಬಿಐ ತನಿಖೆ ಬೇಡ: ಕಪಿಲ್ ಸಿಬಲ್

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಘಟನೆಯ ಕುರಿತು ಸಿಬಿಐ ತನಿಖೆ ಬೇಡ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಕರಣವನ್ನು ರಾಜ್ಯದ ಹೊರಗೆ ವರ್ಗಾಯಿಸುವುದು ಸಮಂಜಸವಲ್ಲ. ಹಿಂಸಾಚಾರ ಎಸಗಿದವರಿಗೆ ಪೊಲೀಸರು ಸಹಕರಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅನಾಗರಿಕರನ್ನು ರಕ್ಷಿಸುವ ರಾಜ್ಯದಲ್ಲಿ ನಮಗೆ ಯಾವ ವಿಶ್ವಾಸವಿದೆ? ಸಿಬಲ್ ಪ್ರಶ್ನಿಸಿದ್ದಾರೆ.

ವಿಶೇಷ ಸಮಿತಿ ರಚನೆ

ಕೇವಲ ಸಿಬಿಐ ಅಥವಾ ಎಸ್‌ಐಟಿಗೆ ಒಪ್ಪಿಸಿದರೆ ಸಾಕಾಗುವುದಿಲ್ಲ. ಕುಟುಂಬವನ್ನು ಕಳೆದುಕೊಂಡ 19 ವರ್ಷದ ಮಹಿಳೆಯೊಬ್ಬರು ಪರಿಹಾರ ಶಿಬಿರದಲ್ಲಿ ಇರುವಂತಹ ಪರಿಸ್ಥಿತಿಯ ನಾವು ಚಿಂತಿಸಬೇಕಾಗಿದೆ. ಅವರಿಗೆ ಮ್ಯಾಜಿಸ್ಟ್ರೇಟ್‌ಗೆ ಹೋಗುವಂತೆ ಹೇಳಲು ಸಾಧ್ಯವಿಲ್ಲ. ನ್ಯಾಯದ ಪ್ರಕ್ರಿಯೆಯು ಅವಳ ಮನೆ ಬಾಗಿಲಿಗೆ ಹೋಗಬೇಕು. ನಾವು ಮಹಿಳಾ ನ್ಯಾಯಾಧೀಶರನ್ನು ಒಳಗೊಂಡ ಸದಸ್ಯರ ಸಮಿತಿಯನ್ನು ರಚಿಸುತ್ತೇವೆ. ಅವರು ಸಹಾಯ ಮಾಡುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist