ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮದುವೆಯಾಗಿ 12 ವರ್ಷ - ವರದಕ್ಷಿಣೆ ಕಿರುಕುಳದಿಂದ ಇಬ್ಬರು ಮಕ್ಕಳನ್ನು ಬಿಟ್ಟು ಗೃಹಿಣಿ ಆತ್ಮಹತ್ಯೆ

Twitter
Facebook
LinkedIn
WhatsApp
ಮದುವೆಯಾಗಿ 12 ವರ್ಷ - ವರದಕ್ಷಿಣೆ ಕಿರುಕುಳದಿಂದ ಇಬ್ಬರು ಮಕ್ಕಳನ್ನು ಬಿಟ್ಟು ಗೃಹಿಣಿ ಆತ್ಮಹತ್ಯೆ

ಮೈಸೂರು: ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ (Dowry) ಗಂಡ (Husband) ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ (House wife) ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.

ವಿಜಯಲಕ್ಷ್ಮಿ (35) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈಕೆ ನಂಜನಗೂಡು ತಾಲೂಕಿನ ಹೊಸಕೋಟೆಯ ಹರೀಶ್ ಎಂಬವರನ್ನು ಮದುವೆಯಾಗಿ 12 ವರ್ಷಗಳಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ವರದಕ್ಷಿಣೆ ಹಣಕ್ಕಾಗಿ ಗಂಡ ಹರೀಶ್, ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ ಮತ್ತು ಮಹೇಂದ್ರ ದಿನ ಪಿಡಿಸುತ್ತಿದ್ದರು.

ಕಿರುಕುಳ ತಾಳಲಾರದೆ ಮನನೊಂದು ಇಬ್ಬರು ಮಕ್ಕಳನ್ನು ಬಿಟ್ಟು ಗಂಡನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ.

ವಿಜಯಲಕ್ಷ್ಮಿ ಪೋಷಕರು ಚಿನ್ನಾಭರಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದರೆ ಗಂಡನ ಮನೆಯವರು ಮಾತ್ರ ಹಣಕ್ಕಾಗಿ ಆಕೆಯನ್ನು ದಿನ ಪಿಡಿಸುತ್ತಿದ್ದರು. ವರದಕ್ಷಿಣೆ ವಿಚಾರವಾಗಿ ಆಗಾಗ ಮನೆಯಲ್ಲಿ ಗಲಾಟೆ ನಡೆಯುತಿತ್ತು. ಈ ಹಿಂದೆಯೂ ಕೂಡ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಗಲಾಟೆ ವಿಚಾರವಾಗಿ ಹಲವು ಬಾರಿ ವಿಜಯಲಕ್ಷ್ಮಿ ದೂರು ನೀಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನದ ನಂತರ ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಜೈಲಿನಲ್ಲಿ ಶ್ರೀರಾಮೋತ್ಸವ ಆಚರಿಸಿದ್ದಕ್ಕೆ ಹಿಂದೂ ಕೈದಿಗಳ ಮೇಲೆ ಹಲ್ಲೆ ಆರೋಪ!

ವಿಜಯಪುರ: ಇದೇ ಜನವರಿ 22ರಂದು ಅಯೋಧ್ಯೆ ಶ್ರೀರಾಮಮಂದಿರದಲ್ಲಿ (Ram Mandir) ಬಾಲಕ ರಾಮನ ಪ್ರಾಣಪ್ರತಿಷ್ಠೆ ನೆರವೇರಿತು. ಇದೇ ಸಮಯಕ್ಕೆ ಶ್ರೀರಾಮನ ಭಕ್ತರು ದೇಶಾದ್ಯಂತ ವಿಶೇಷ ಪೂಜೆ-ಪುನಸ್ಕಾರಗಳನ್ನ ನೆರವೇರಿಸಿದ್ದರು.

ಅದರಂತೆ ವಿಜಯಪುರದ ಜೈಲಿನಲ್ಲಿಯೂ (Vijaypura Jail) ಕೆಲ ಕೈದಿಗಳು ಜೈಲಿನಲ್ಲಿ ರಾಮೋತ್ಸವ ಆಚರಣೆ ಮಾಡಿದ್ದರು. ಇದನ್ನು ಸಹಿಸದ ಕೆಲವು ಅಧಿಕಾರಿಗಳು ಮುಸ್ಲಿಂ ಖೈದಿಗಳಿಂದ ಹಿಂದೂ ಕೈದಿಗಳ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿಜಯಪುರದ ಕೇಂದ್ರ ಕಾರಾಗೃಹದ ದರ್ಗಾ ಜೈಲ್‌ನಲ್ಲಿ ಘಟನೆ ನಡೆದಿದ್ದು, ಜೈಲಿನಲ್ಲಿ ರಾಮೋತ್ಸವ ಆಚರಿಸಿದ್ದಕ್ಕಾಗಿ ಹಿಂದೂ ಕೈದಿಗಳ (Prisoners) ಮೇಲೆ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ.

ಜ.22ರಂದು ಪ್ರಾಣಪ್ರತಿಷ್ಠೆ ಸಮಯಕ್ಕೆ ಜೈಲಿನಲ್ಲಿದ್ದ ಮಹಾರಾಷ್ಟ್ರ ಮೂಲದ ಪರಮೇಶ್ವರ ಜಾಧವ (ದೇವಾ), ರಮೇಶ ದಳವಿ, ಪ್ರದೀಪ ಮಾನೆ ಎಂಬ ಹಿಂದೂ ಕೈದಿಗಳು ಸೆಲ್‌ನಲ್ಲೇ ಶ್ರೀರಾಮೋತ್ಸವ ಆಚರಣೆ ಮಾಡಿದ್ದರು. ಇದರಿಂದ ಕೋಪಗೊಂಡ ಜೈಲರ್ ತನ್ನ ಕಚೇರಿಗೆ ಕರೆಸಿ ಮುಸ್ಲಿಂ ಕೈದಿಗಳಿಂದ ಹಲ್ಲೆ ಮಾಡಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲ್‌ನಲ್ಲಿರುವ ಶೇಖ್ ಅಹ್ಮದ್ ಹಾಗೂ ಸಹಚರರಿಂದ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಲ್ಲೆಗೆ ಜೈಲಿನಲ್ಲಿರುವ ಇತರ ಮುಸ್ಲಿಂ ಅಧಿಕಾರಿಗಳೂ ಸಾಥ್ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಆರೋಪ ಮಾಡಿರುವ ವೀಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಜೈಲರ್ ನಡೆಯನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ಸಂಬಂಧ ಪಟ್ಟ ಅಧಿಕಾರಿ ಹಾಗೂ ಹಲ್ಲೆ ನಡೆಸಿದ ಇತರ ಕೈದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist