ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಲಿಕಾಪ್ಟರ್ ರೀತಿ ಪರಿವರ್ತನೆ ಮಾಡಿದ ಮಾರುತಿ ವ್ಯಾಗನ್ಆರ್ ಕಾರು; ಸೀಜ್ ಮಾಡಿದ ಪೊಲೀಸರು.!

Twitter
Facebook
LinkedIn
WhatsApp
ಹೆಲಿಕಾಪ್ಟರ್ ರೀತಿ ಪರಿವರ್ತನೆ ಮಾಡಿದ ಮಾರುತಿ ವ್ಯಾಗನ್ಆರ್ ಕಾರು; ಸೀಜ್ ಮಾಡಿದ ಪೊಲೀಸರು.!

ಸಾಮಾಜಿಕ ಜಾಲತಾಣ (Social media) ಇಂದು ಎಲ್ಲೆಡೆ ತನ್ನ ಭುಜಬಲವನ್ನು ವಿಸ್ತರಿಸಿಕೊಂಡಿದೆ. ದೇಶದ ಯಾವುದೇ ಮೂಲೆಯಲ್ಲಿ ನಡೆಯುವ ಕೆಲವೊಂದು ವಿಚಾರಗಳು ತೀವ್ರ ಕುತೂಹಲ ಕೆರಳಿಸಿ, ಭಾರೀ ವೈರಲ್ ಆಗುತ್ತವೆ. ಸದ್ಯ ಉತ್ತರಪ್ರದೇಶದಲ್ಲಿ ವಿಡಿಯೋವೊಂದು ಸಖತ್ ಹಲ್-ಚಲ್ ಸೃಷ್ಟಿಸಿದ್ದು, ನೆಟ್ಟಿಗರಿಂದ ಕೂಡ ವ್ಯಾಪಕದ ಪ್ರತಿಕ್ರಿಯೆಯನ್ನು ಪಡೆದು

ಇತ್ತೀಚೆಗೆ ಉತ್ತರ ಪ್ರದೇಶ (Uttar Pradesh)ದ ಅಂಬೇಡ್ಕರ್ ನಗರದಲ್ಲಿ ಇಬ್ಬರು ಸಹೋದರರು ಹಳೆಯ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಕಾರನ್ನು ಹೆಲಿಕಾಪ್ಟರ್ (Helicopter) ಆಗಿ ಪರಿವರ್ತನೆ ಮಾಡಿದ್ದರು. ಆ ಕಾರಿಗೆ ಹೊಸದಾಗಿ ಬಣ್ಣವನ್ನು ಬಳಿಸಲು ತೆಗೆದುಕೊಂಡು ಹೋಗುವಾಗ ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ವಿವಿಧ ಮಾಧ್ಯಮಗಳ ವರದಿ ಪ್ರಕಾರ, ಹೆಲಿಕಾಪ್ಟರ್ ರೀತಿಯಲ್ಲಿ ಬದಲಾಯಿಸಲಾದ ವ್ಯಾಗನ್ಆರ್ ಕಾರನ್ನು ಪೇಂಟ್‌ಗಾಗಿ ಸಹೋದರರಿಬ್ಬರು ಅಕ್ಬರ್‌ಪುರಕ್ಕೆ ಕೊಂಡೊಯ್ಯುತ್ತಿದ್ದರು. ಆ ವೇಳೆ, ಕೊಟ್ವಾಲಿ ಎಂಬಲ್ಲಿ ಇತರೆ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಪೊಲೀಸರು, ಮಾರ್ಪಾಡುಗೊಳಿಸಿದ ಕಾರನ್ನು ಮೋಟಾರು ವಾಹನ ನಿಯಮಗಳ ಉಲ್ಲಂಘನೆಯಡಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಸಹೋದರರಿಬ್ಬರು ಮದುವೆ ಸಮಾರಂಭಗಳಿಗೆ ಈ ಕಾರನ್ನು ಬಾಡಿಗೆ ನೀಡುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ.

ಈ ಕಾರಿನ ವಿಡಿಯೋವನ್ನು ಮಾರ್ಚ್ 17ರಂದು ಪತ್ರಕರ್ತೆ ಪ್ರಿಯಾ ಸಿಂಗ್ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಅಂದಿನಿಂದ ಇಲ್ಲೆವಯವರೆಗೆ 71 ಸಾವಿರಕ್ಕೂ ಹೆಚ್ಚಿನ ಮಂದಿ ವೀಕ್ಷಿಸಿದ್ದು, ಹಲವಾರು ಲೈಕ್ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಜೊತೆಗೆ ತರಹೇವಾರಿ ಕಾಮೆಂಟ್ ಸಹ ಮಾಡಿದ್ದಾರೆ. ನೆಟ್ಟಿಗರೊಬ್ಬರು, ‘ಇದು ಭಾರತದಲ್ಲಿ ಮಾತ್ರ ನಡೆಯುತ್ತದೆ’ ಎಂದು ಹೇಳಿದ್ದಾರೆ.

ಮತ್ತೊಬ್ಬ ಸಾಮಾಜಿಕ ಜಾಲತಾಣ ಬಳಕೆದಾರ ‘ನಾವು ಹೊಸತನದ ಆವಿಷ್ಕಾರಗಳನ್ನು ಗೌರವಿಸಬೇಕು. ಇದು ಪ್ರಗತಿಯನ್ನು ಹೆಚ್ಚಿಸುತ್ತದೆ. ಬೆಳವಣಿಗೆಯನ್ನು ಉತ್ತೇಜಿಸಲು, ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಪ್ರತಿಯೊಬ್ಬರ ಜೀವನದ ಗುಣಮಟ್ಟವನ್ನು ಸುಧಾರಿಸಲು ಆವಿಷ್ಕಾರಗಳನ್ನು ಗೌರವಿಸುವುದು ಮತ್ತು ಪ್ರೋತ್ಸಾಹಿಸುವುದು ಬಹಳ ಮುಖ್ಯ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ನೆಟ್ಟಿಗ ‘ಅನುಮತಿಯಿಲ್ಲದೆ ಮಾಡಿದರೆ ಹೀಗಾಗುತ್ತದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸಾರಿಗೆ ಇಲಾಖೆಯ ನಿಯಮಗಳ ಪ್ರಕಾರ, ಯಾವುದೇ ವಾಹನವನ್ನು ಪರವಾನಗಿ ಇಲ್ಲದೆ ಪರಿವರ್ತನೆ ಮಾಡಬಾರದು. ಈ ಘಟನೆಯಲ್ಲಿ ಪೊಲೀಸರು ದಂಡ ವಿಧಿಸಿ, ಆ ನಂತರ ಕಾರನ್ನು ಹಿಂದಿರುಗಿಸಿದ್ದಾರೆ. ಇದು ಸಹೋದರರ ಸೃಜನಶೀಲ ಆವಿಷ್ಕಾರದ ಬಗ್ಗೆ ಬೆಳಕು ಚೆಲ್ಲುತ್ತದೆ. ಜೊತೆಗೆ ಭಾರತದಲ್ಲಿ ವಾಹನ ಪರಿವರ್ತನೆಗೆ ಇರುವ ಅಡೆತಡೆಗಳ ಕುರಿತಂತೆಯೂ ಚರ್ಚೆಯನ್ನು ಹುಟ್ಟುಹಾಕುತ್ತದೆ.

ಸಾಮಾನ್ಯ ಜನರು ಹಾಗೂ ಪರಿಸರಕ್ಕೆ ತೊಂದರೆಯಾಗದ ರೀತಿಯಲ್ಲಿ ಯಾವೆಲ್ಲ ಅಂಶಗಳನ್ನು ಗಮನದಲ್ಲಿಕೊಂಡು ವಾಹನಗಳನ್ನು ಪರಿವರ್ತನೆಗೆ ಒಳಪಡಿಸಬಹುದು ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಕೂಡ ಹೆಚ್ಚಿನ ಅರಿವನ್ನು ಮೂಡಿಸಬೇಕು. ಸಾಧ್ಯವಾದರೆ ಒಂದಷ್ಟು ನಿಯಮಗಳನ್ನು ಸಡಿಲಗೊಳಿಸುವ ಕುರಿತು ಆಲೋಚಿಸುವುದು ಉತ್ತಮ. ಹಾಗೆಯೇ ವಾಹನ ಕ್ಷೇತ್ರದಲ್ಲಿ ಹೊಸತನದ ಆವಿಷ್ಕಾರವನ್ನು ಪ್ರಯತ್ನಿಸುವವರೂ ಅದು ಸೀಮಿತ ವ್ಯಾಪ್ತಿಯಲ್ಲಿ ಇದೆಯೇ ಎಂದು ಖಚಿತಪಡಿಕೊಂಡು, ನಿರ್ದಿಷ್ಟ ಇಲಾಖೆಯ ಒಪ್ಪಿಗೆ ಪಡೆಯುವುದು ಸೂಕ್ತ ಎಂಬುದು ನುರಿತವರ ಅಭಿಪ್ರಾಯವಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist