ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಟಿ ಅಧಿಕಾರಿಗಳ ಭರ್ಜರಿ ದಾಳಿ ; ರೂಂನಲ್ಲಿ ಮಂಚದಡಿ 23 ಬಾಕ್ಸ್ ನಲ್ಲಿ ಕಂತೆ ಕಂತೆ ಹಣ ಪತ್ತೆ...!

Twitter
Facebook
LinkedIn
WhatsApp
ಐಟಿ ಅಧಿಕಾರಿಗಳ ಭರ್ಜರಿ ದಾಳಿ ; ರೂಂನಲ್ಲಿ ಮಂಚದಡಿ 23 ಬಾಕ್ಸ್ ನಲ್ಲಿ ಕಂತೆ ಕಂತೆ ಹಣ ಪತ್ತೆ...!

ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಸಂಜೆ ನಂತರ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಏಕಕಾಲದಲ್ಲಿ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ (IT Raid) ನಡೆದಿದ್ದು, ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯಲ್ಲಿದ್ದ ಮಂಚದಡಿ ಬಚ್ಚಿಟ್ಟಿದ್ದ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಫ್ಲಾಟ್​ನಲ್ಲಿ ಬರೊಬ್ಬರಿ 23 ಬಾಕ್ಸ್​ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಾಗಿತ್ತು ಎಂದು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ಏಕಕಾಲದಲ್ಲಿ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಆತ್ಮಾನಂದ ಕಾಲೋನಿಯ ಒಂದು ಫ್ಲಾಟ್​ನ ಕೊಠಡಿಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಂಚದಡಿ ಪರಿಶೀಲನೆ ನಡೆಸಿದಾಗ ಕೋಟ್ಯಂತರ ರೂಪಾಯಿ ಪತ್ತೆಯಾಗಿದೆ. ಪತ್ತೆಯಾದ ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ ಅಧಿಕಾರಿಗಳು, ಬಳಿಕ ಮಾಜಿ ಕಾರ್ಪೋರೇಟರ್​ ಮನೆ ಬಾಗಿಲು ತಟ್ಟಿದ್ದಾರೆ.

ಗಣೇಶ ಬ್ಲಾಕ್​ನಲ್ಲಿರುವ ವಾರ್ಡ್ ನಂ 95ರ ಮಾಜಿ ಕಾರ್ಪೊರೇಟರ್ ಅಶ್ವತಮ್ಮ ಹಾಗೂ ಆರ್.ಅಂಬಿಕಾಪತಿ ದಂಪತಿಗಳ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

ಸದ್ಯ, ಫ್ಲಾಟ್​ನಲ್ಲಿ ಪತ್ತೆಯಾದ ಕೋಟ್ಯಂತರ ರೂಪಾಯಿ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಸಲಿಗೆ ಹಣ ಪತ್ತೆಯಾದ ಫ್ಲ್ಯಾಟ್ ಯಾರದ್ದು? ಗುಟ್ಟು ಬಿಟ್ಟು ಕೊಡದ ಐಟಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಬಳಕೆ ಮಾಡದ ರೂಮ್​ನಲ್ಲಿ ಕಂತೆ ಕಂತೆ ನೋಟುಗಳು

ಫ್ಲಾಟ್​ನ ಬೆಡ್ ರೂಮ್​ನ ರೂಮ್​ವೊಂದರ ಮಂಚದ ಅಡಿಯಲ್ಲಿ ಹಣ ಬಚ್ಚಿಟ್ಟ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ರೂಮ್​ ಅನ್ನು ಬಳಸುತ್ತಾ ಇರಲಿಲ್ಲ, ಬೀಗ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಟ್ರಾಕ್ಟರ್ ಆಗಿರುವ ಆರ್.ಅಂಬಿಕಾಪತಿ ಕೆಂಪಣ್ಣ ಅವರ ಕಾಂಟ್ರಾಕ್ಟರ್ ಸಂಘದಲ್ಲಿ ಗುರುತಿಸಿಕೊಂಡಿದ್ದರು. ಫ್ಲಾಟ್​ನಲ್ಲಿ ಸಿಕ್ಕ ಹಣದ ಹಿಂದೆ ಐಟಿಗೆ ದೊಡ್ಡ ಅನುಮಾನ ವ್ಯಕ್ತವಾಗಿದೆ. ಹಣ ಒಂದೇ ಕಡೆ ಸಂಗ್ರಹಣೆ ಹಿಂದಿದೆಯಾ ಚುನಾವಣೆ ತಯಾರಿ? ಪಂಚರಾಜ್ಯಗಳ ಚುನಾವಣೆಗಾಗಿ ಸಂಗ್ರಹಿಸಲಾಗಿತ್ತೇ ಈ ಹಣ ಎಂಬ ಅನುಮಾನ ಕಾಡಿದೆ.

40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಅಂಬಿಕಾಪತಿ

ಬಿಜೆಪಿ ಸರ್ಕಾರದ ವಿರುದ್ಧ ಆರ್​ ಅಂಬಿಕಾಪತಿ ಅವರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇ.40, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಹೇಳಿ ಕೆಲವು ರಾಜಕೀಯ ನಾಯಕರ ಮೇಲೆ ಗಂಭೀರ ಆರೋಪ ಮಾಡಿದ್ದರು. ಕೆಲವು ರಾಜಕೀಯ ವ್ಯಕ್ತಿಗಳ ವಿರುದ್ಧ ಆರೋಪ ಮಾಡಿದ್ದರು.

ಅಂಬಿಕಾಪತಿಯ ಪತ್ನಿ ಅಶ್ವತಮ್ಮ ಅವರು ಮಾಜಿ ಶಾಸಕರೊಬ್ಬರ ಸಂಬಂಧಿ ಎನ್ನಲಾಗುತ್ತಿದೆ. ಇವರು 2001ರ ಕಾವಲ್ ಬೈರಸಂದ್ರ ವಾರ್ಡ್​ನ ಕಾರ್ಪೊರೇಟರ್ ಆಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ